ರಾಮದುರ್ಗ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು ಬೃಹತ್ ತಿರಂಗಾ ಯಾತ್ರೆ, ಬೈಕ್ ರ್ಯಾಲಿ ಹಾಗೂ ಪಥಸಂಚಲನದ ಮೂಲಕ ದೇಶಭಕ್ತಿ ಸಾರಿದ ಮಾಜಿ ಯೋಧರು ಕಾರ್ಗಿಲ್ ವೀರರನ್ನು ಸ್ಮರಿಸಿದರು. ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಶೌರ್ಯವನ್ನು ಸ್ಮರಿಸುವ ಉದ್ದೇಶದಿಂದ ರಾಮದುರ್ಗದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್…
