ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್ಗೂ ನಿಂದಿಸಿದ್ದನಾ ‘ಕೈ’ ಮುಖಂಡ?
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು, ಆದರೆ ತಾನು ಆಡಿಯೋ ರೆಕಾರ್ಡ್ ಮಾಡಿಕೊಂಡಿಲ್ಲ ಎಂದವರು ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆ ಆಯುಕ್ತೆ ಅಮೃತಾ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ. ಆರೋಪಿಗಾಗಿ 3 ತಂಡಗಳಿಂದ ಹುಡುಕಾಟ ಶಿಡ್ಲಘಟ್ಟ…
