ರಾಮದುರ್ಗ ಶಾಸಕರ ನೇತೃತ್ವದಲ್ಲಿ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಬೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾ ಭವನದಲ್ಲಿ ಮಂಗಳವಾರ ಜರಗಿದ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ವಹಿಸಿ ಮಾತನಾಡಿದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ನವೀನ್ ನಿಜಗುಲಿ ಇವರಿಗೆ ಶಾಸಕರಿಂದ ಖಡಕ ಎಚ್ಚರಿಕೆ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಕೇವಲ ಬಾಗಲಕೋಟೆಗೆ ಏಕೆ ಹೆಚ್ಚಿನ ಚಿಕಿತ್ಸೆಗೆ ಶಿಪಾರಸ್ಸು ಮಾಡುತ್ತೀರಿ, ಬೆಳಗಾವಿಗೆ ಹಾಗೂ ಹುಬ್ಬಳ್ಳಿ ಕೇವಲ ೧೦೦ ಕಿ.ಮೀ ಅಂತರ ಇವೆ. ಉಚಿತ ಅಂಬ್ಯುಲೆನ್ಸ್…

Read More

ರಾಮದುರ್ಗ ಪಟ್ಟಣದಲ್ಲಿ ವಿವಿಧ ಕಡೆ ಬೀದಿ ದೀಪಗಳಿಗೆ ಶಾಸಕ ಅಶೋಕ್ ಪಟ್ಟಣ ಅವರು ಚಾಲನೆ ನೀಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದ ಸುರೇಬಾನ ಸರ್ಕಲ್ ಹಾಗೂ ಬಸವೇಶ್ವರ ಸರ್ಕಲ್ ದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯುತ್ ಬೀದಿ ದೀಪದ ಕಂಬಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ ಅವರು ಪೂಜೆ ಸಲ್ಲಿಸಿದರೊಂದಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ಸೋಮಶೇಖರ್ ಸಿದ್ಲಿಂಗಪ್ಪ ನವರ, ಪುರಸಭೆ ಸದಸ್ಯರು ಹಾಗೂ ಇನ್ನೂ ಅನೇಕ ಗಣ್ಯರು ಭಾಗವಹಿಸಿದ್ದರು

Read More

ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಶ್ರೀನಿವಾಸಗೌಡ ಪಾಟೀಲ ಅವರ ನೇತೃತ್ವದಲ್ಲಿ ತಾ.ಪಂ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಮತ್ತು ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಸಾಬಿತಾಗಿದ್ದು, ಸರ್ಕಾರದ ನಷ್ಟದ ಹಣವನ್ನು ತಪ್ಪಿತಂಸ್ಥತರಿಂದ ವಸೂಲಿಸದೇ, ಪ್ರಕರಣ ದಾಖಲಿಸದೇ ತಪ್ಪಿತಸ್ಥರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಅವರ ನೇತೃತ್ವದಲ್ಲಿ ಸಾರ್ವಜನಿಕರು ತಾ.ಪಂ ಕಚೇರಿ ಮುಂದೆ ಅನಿರ್ಧಿಷ್ಟಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ವಾಸುದೇವ ಸನ್ನಸತ್ತಿ, ಅಡಿವೆಪ್ಪ ದ್ಯಾಮನ್ನವರ, ಕಾಳಪ್ಪ ಕಮ್ಮಾರ, ನಿಂಗನಗೌಡ ಸಂಗನಗೌಡ್ರ, ಸುಬ್ರಾಯಪ್ಪ ಪೂಜೇರ, ಮಲ್ಲಪ್ಪ ಮದರಖಂಡಿ, ಶಿವಪ್ಪ ಯಂಡಿಗೇರಿ, ಮಲ್ಲಿಕಾರ್ಜುನ ರಾಮದುರ್ಗ,…

Read More

ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಶಾಸಕರ ಕ್ಷೇತ್ರದ ಮಾದರಿ ಶಾಲೆಯಲ್ಲಿ ಸೋಮವಾರ ಶಾಲಾ ಮಕ್ಕಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ಕನ್ನು ವಿತರಿಸಿ ಮಾತನಾಡಿದರು.ಚುನಾವಣೆ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಭರವಸೆಯಂತೆ ಈಗ ತಾಲೂಕಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ಹಾಗೂ ನೋಟ್ ಬುಕ್‌ಗಳನ್ನು ವಿತರಿಸಲಾಗುತ್ತಿದೆ ಈಗ ಸಾಂಕೇತಿಕವಾಗಿ ವಿತರಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ…

Read More

ಹಾವೇರಿಯಲ್ಲಿ ಸಾಹಿತ್ಯಗೆ ಪ್ರತಿಭಾ ಪುರಸ್ಕಾರ ಪ್ರದಾನ

ಕೊಪ್ಪಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ಜಿಲ್ಲಾ ಘಟಕ, ಹಾವೇರಿ ವತಿಯಿಂದ 2024ನೇ ಸಾಲಿನ ರಾಜ್ಯಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೊಪ್ಪಳ ನಗರದ ಸಾಹಿತ್ಯ ಎಂ. ಗೊಂಡಬಾಳ ಅವರನ್ನು ಸನ್ಮಾನಿಸಲಾಯಿತು. ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ…

Read More

ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 9ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರ ವಶಕ್ಕೆ

ಸಿರುಗುಪ್ಪ, ತಾಲ್ಲೂಕಿನ ಗೋಸಬಾಳು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸಿರಿಗೇರಿ ಪೊಲೀಸ್ ಠಾಣೆಯ ಎ ಎಸ್ ಐ ಶ್ರೀನಿವಾಸ ನೇತೃತ್ವದ ತಂಡ ದಾಳಿ ನಡೆಸಿ 26100 ಮೌಲ್ಯದ 25 ಚೀಲದಲ್ಲಿ 9ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಗೋಸಬಾಳ ಗ್ರಾಮ ಈಶ್ವರ ಗುಡಿ ಹತ್ತಿರ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಹೋಳಗುಂದ ಗ್ರಾಮದ ಪಂಚಣ್ಣ ಇವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ ಇಲಾಖೆ ಸಿಬ್ಬಂದಿಗಳು ಹಾಗೂ ಸಿರುಗುಪ್ಪ…

Read More

ಕಟಕೋಳದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ : ಪೊಲೀಸ್ ಹಾಗೂ ಆಹಾರ ಇಲಾಖೆಯಿಂದ ದಾಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಿಂದ ಹಳೆ ತೋರಗಲ್ಲ ಕಡೆಗೆ ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುವಾಗ ಪೊಲೀಸ್ ಇಲಾಖೆ ಹಾಗೂ ಆಹಾರ ಇಲಾಖೆಯಿಂದ ಅಕ್ರಮ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಯಿತುಬಡ ಜನರ ಹೊಟ್ಟೆ ತುಂಬಲಿ ಎಂದು ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪಡಿತರ ಅಂಗಡಿಗಳ ಮೂಲಕ ಅಕ್ಕಿ ನೀಡುತ್ತದೆ. ಆದ್ರೆ, ಕಟಕೋಳದಲ್ಲಿ ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ, ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮವಾಗಿ ಪಡಿತರ ಆಹಾರ ಧಾನ್ಯಗಳನ್ನು ಸಂಗ್ರಹಿಸಿ ಮಾರಾಟ ಮಾಡುವ ದೊಡ್ಡ ಜಾಲ…

Read More

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆತಾಂತ್ರಿಕ ಲೋಪದೋಷ ಕಂಡುಬಂದಲ್ಲಿ ಕೂಡಲೇ ಸರಿಪಡಿಸಿ: ಎಡಿಸಿ ಮೊಹಮ್ಮದ್ ಎನ್.ಝುಬೇರ್

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್ ಮಾತನಾಡಿದರು. ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿದ್ದು, ಲೋಪದೋಷ ಹಾಗೂ ವಿಳಂಬ ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ…

Read More

ಬಳ್ಳಾರಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನ ಸಮಪರ್ಕವಾಗಿ ಬಳಸಿಕೊಳ್ಳಲು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ ಪಟ್ಟಣದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 2024-25ನೇ ಸಾಲಿಗೆ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಅನುದಾನವನ್ನು ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಉಪಯೋಗಿಸುತ್ತಿದ್ದು, ಪ್ರಗತಿಯಲ್ಲಿ ಹಿನ್ನಡೆಯಾಗಬಾರದು ಮತ್ತು ಉದ್ದೇಶಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.ಜಿಲ್ಲೆಯ ಒಟ್ಟು ಎಸ್‍ಸಿಎಸ್‍ಪಿ ಅನುದಾನ ರೂ.3977.90 ಲಕ್ಷ ಅನುದಾನ ಬಿಡುಗಡೆಯಾಗಿದೆ. ಟಿಎಸ್‍ಪಿ ರೂ.5609.28 ಲಕ್ಷ ಅನುದಾನ…

Read More

ಹೆಲ್ಮೆಟ್ ಹಾಗೂ ಮಾದಕ ವ್ಯಸನ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಬೈಕ್‌ರೈಡ್ ಮಾಡುವ ಮೂಲಕ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಸಂಚಾರಿ ನಿಯಮಗಳ ಪಾಲನೆ, ಮಾದಕ ವ್ಯಸನ ವಿರೋದಿ ಹಾಗೂ ಹೆಲ್ಮೆಟ್ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯಿತ ಸಿಎಸ್ ರಾಹುಲ್ ಶಿಂಧೆ ಬೈಕ್ ರೈಡ್ ಮಾಡುವ ಮೂಲಕ ಚಾಲನೆ ನೀಡಿ, ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿಯ ಮೂಲಕ ರಾಮದುರ್ಗ ಪಟ್ಟನವನ್ನು ರೌಂಡ್ ಹಾಕಿದರು.ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಬೈಕ್ ರ‍್ಯಾಲಿ ಹುತಾತ್ಮ…

Read More