ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ 2023-24 ನೇ ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ 2023-24 ನೇ ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು .ಜಿಲ್ಲೆಯ ಎಲ್ಲ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ಒಮ್ಮೆಲೆ ವಿತರಿಸಲು ಕ್ರಮ ಕೈಗೊಳ್ಳುವುದು ಸೂಕ್ತ….
