ರಾಮದುರ್ಗದ ಎಸ್ಐಎಸ್ ವಾಯ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕ ಡಾ. ರಾಜು ಕಂಬಾರರನ್ನು ಸತ್ಕರಿಸಲಾಯಿತು.

ರಾಮದುರ್ಗ: ಕನ್ನಡ ಭಾಷೆ ಮತ್ತು ಸಂಸ್ಕೃತಿ ವಿಶ್ವದಲ್ಲಿ ಅತ್ಯಂತ ಶ್ರೀಮಂತವಾಗಿದ್ದು, ವಿದ್ಯಾರ್ಥಿಗಳು ಕನ್ನಡ ನಾಡು-ನುಡಿಯ ಪ್ರಜ್ಞಾವಂತಿಕೆಯನ್ನು ಬೆಳೆಸಿಕೊಳ್ಳಬೇಕೆಂದು ಸಾಹಿತಿ- ಕನ್ನಡ ಉಪನ್ಯಾಸಕ ಡಾ. ರಾಜು ಕಂಬಾರ ಹೇಳಿದರು.

Read More

ಬದುಕಿನ ಮೌಲ್ಯಗಳನ್ನು ತಮ್ಮ ಸಾಹಿತ್ಯದ ಮೂಲಕ ಗಾಢವಾಗಿ ತೋರಿಸಿಕೊಟ್ಟವರು ಬೇಂದ್ರೆ: ಡಾ. ಮಲ್ಲಿಕಾ ಘಂಟಿ

ಧಾರವಾಡ ಒಬ್ಬ ಕವಿ ಕಾಲಾನಂತರದಲ್ಲಿಯೂ ಇಂದಿನ ಯುವಕರು ಕಥೆ, ಕಾವ್ಯವನ್ನು ಕಟ್ಟುವಂತಹ ರೀತಿಯಲ್ಲಿ ಬದುಕಿದ್ದರು. ಆ ಎಲ್ಲ ಪ್ರಸಂಗಗಳು ಮಾನವೀಯ ನೆಲೆಯೊಳಗೆ ಇರುವಂತಹವುಗಳು ಮತ್ತು ಬದುಕಿನ ಮೌಲ್ಯಗಳನ್ನು ಬಹಳಷ್ಟು ಗಾಢವಾಗಿ ತಮ್ಮ ಸಾಹಿತ್ಯದ ಮೂಲಕ ತೋರಿಸಿಕೊಟ್ಟವರು ಬೇಂದ್ರೆಯವರು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಅವರು ಹೇಳಿದರು. ಧಾರವಾಡ ಡಾ.ದ.ರಾ.ಬೇಂದ್ರೆ ಭವನದಲ್ಲಿ ಧಾರವಾಡ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ದಿಂದ ವರಕವಿ ಡಾ.ದ.ರಾ.ಬೇಂದ್ರೆ ಅವರ 44 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Read More

ಮುದಕವಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಜರಗುವುದು.

ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವ ಮತ್ತು ಜಾತ್ರಾ ಮಹೋತ್ಸವ ಇದೇ ತಿಂಗಳು 27ರಿಂದ 28ರ ವರೆಗೆ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಶ್ರೀ ಶ್ರೀ ಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಉಡಿ ತುಂಬುವ ಕಾರ್ಯಕ್ರಮ ಮಹಾ ಕುಂಭಾಭಿಷೇಕ ರುದ್ರಾಭಿಷೇಕ ಗುಗ್ಗುಳು ಮತ್ತು ಸಾಮೂಹಿಕ ವಿವಾಹಗಳು ಮಹಾರಾತ್ಯೋತ್ಸವ ನೆರವೇರಲಿವೆ. ಈ ಕುರಿತಂತೆ ಸುದ್ದಿಗೋಷ್ಠಿ…

Read More

ಕಲಹಾಳ ಶಾಲೆ ಆವರಣದಲ್ಲಿ ಅಕ್ರಮ ಶೆಡ್‌ಗಳಲ್ಲಿ ವಾಸವಿರುವ ದಲಿತ ಕುಟುಂಬಗಳಿಗೆ ಪರ್ಯಾಯ ನಿವೇಶನದ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದ ಜಾಗೆಯಲ್ಲಿ ಅಕ್ರಮ ಶೆಡ್‌ಗಳಲ್ಲಿ ವಾಸವಿರುವ ದಲಿತ ಕುಟುಂಬಗಳಿಗೆ ಪರ್ಯಾಯ ನಿವೇಶನದ ವ್ಯವಸ್ಥೆ ಕಲ್ಪಿಸಿ, ಶಾಲಾ ಮಕ್ಕಳಿಗೆ ಆಗುತ್ತಿರುವ ಅಡಚಣೆಯನ್ನು ತಪ್ಪಿಸುವಂತೆ ಒತ್ತಾಯಿಸಿ ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.ಎರಡು ದಶಕದ ಹಿಂದೆ ಅತೀಯಾಗಿ ಮಳೆ ಸುರಿದಿದ್ದರಿಂದ ದಲಿತ ಸಮುದಾಯದ ಓಣಿಯಲ್ಲಿ ಮಳೆ ನೀರು ನುಗ್ಗಿದ ಪರಿಣಾಮ ನಿರಾಶ್ರಿತರಾದ ಸುಮಾರು 10 ಕುಟುಂಬಗಳಿಗೆ…

Read More

ಲೋಕಾಪೂರ-ಧಾರವಾಡ ಹೊಸ ರೈಲ್ವೆ ಲೈನ್ ಗೆ ಪ್ರಾಮಾಣಿಕ ಪ್ರಯತ್ನ ನಡದಿದೆ:ಜಗದೀಶ್ ಶೆಟ್ಟರ್

ಬೆಳಗಾವಿ: ಲೋಕಾಪುರದಿಂದ ಧಾರವಾಡಕ್ಕೆ ನೂತನ ರೈಲು ಮಾರ್ಗಕ್ಕಾಗಿ 2019 ರಲ್ಲಿ ನಡೆದ ಸಮೀಕ್ಷೆಯ ವರದಿಯಲ್ಲಿ ಕೆಲವು ಅಂಕಿಸಂಖ್ಯೆಗಳ ವ್ಯತ್ಯಾಸದಿಂದ ಈ ಯೋಜನೆಗೆ ತಡೆ ನೀಡಲಾಗಿತ್ತು. ಈಗ ಮತ್ತೇ ಈ ಯೋಜನೆ ಅನುಷ್ಠಾನಕ್ಕೆ ಬರುವುದು ನಿಶ್ಚಿತ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಹೇಳಿದರು. ರಾಮದುರ್ಗ ತಾಲೂಕ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಮುಖಂಡರುಗಳ ನಿಯೋಗವು ರವಿವಾರ ಸಂಸದ ಜಗದೀಶ್ ಶೆಟ್ಟರಿಗೆ ಅವರ ಕಾಡಾ ಕಚೇರಿಯಲ್ಲಿ ಭೇಟಿ ಮಾಡಿ ಲೋಕಾಪುರದಿಂದ ಧಾರವಾಡ ನೂತನ ರೈಲು ಮಾರ್ಗದ ಯೋಜನೆ…

Read More

ರಾಮದುರ್ಗ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಧ್ವಜದ ಕಟ್ಟಿಯನ್ನು ಮಲ್ಲಣ್ಣ ಯಾದವಾಡ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ರಾಧಾಪೂರ ಪೇಟೆಯಲ್ಲಿ ಶ್ರೀ ದೇವರ ದಾಸಿಮಯ್ಯ ನವರ ವೃತ್ತದ ಹತ್ತಿರ ಎಚ್.ಶಿವರಾಮೇಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಧ್ವಜದ ಕಟ್ಟಿಯನ್ನು ಬೆಳಗಾವಿಯ ಬಿ.ಡಿ.ಸಿ.ಸಿ ಬ್ಯಾಂಕಿನ ನೂತನ ನಿರ್ದೇಶಕರಾದ ಮಲ್ಲಣ್ಣ ಯಾದವಾಡ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಪುರಸಭೆಯ ಮಾಜಿ ಅಧ್ಯಕ್ಷರಾದ ಅಶೋಕ ಸುಳಿಭಾವಿ, ಪುರಸಭೆಯ ಸದಸ್ಯರಾದ ಪ್ರಹ್ಲಾದ ಬಡಿಗೇರ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ವಿನಯ ಚಂದರಗಿ, ಉಪಾಧ್ಯಕ್ಷರುಗಳಾದ ಅಂಬರೀಶ್ ಬಟಕುರ್ಕಿ, ವೆಂಕಣ್ಣ ನಂದಗಾವಿ, ಸಂಗಮೇಶ ನರನೂರ…

Read More

ಕಿತ್ತೂರು ರಾಣಿ‌ ಚನ್ನಮ್ಮ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಿತ್ತೂರು ರಾಣಿ‌ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ತೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರು ಇಡಲು ಕೇಂದ್ರಕ್ಕೆ ಪತ್ರ ಬರೆದು ಒಂದು‌ ವರ್ಷವಾದರೂ ಕೇಂದ್ರ‌ ಸರಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಶನಿವಾರ ನಡೆದ ಮೂರು‌ ದಿನಗಳ ಕಾಲ ನಡೆದ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಿತ್ತೂರು ರಾಣಿ…

Read More

ಸವದತ್ತಿ ಯಲ್ಲಮ್ಮ ಗುಡ್ಡಕ್ಕೆಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿಭೇಟಿ ನೀಡಿ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು.

ಬೆಳಗಾವಿ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ ಅವರು ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿ ನಿಗಮದ ವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು. ಮಳಿಗೆಗಳ ಹಂಚಿಕೆ ಕುರಿತು ದೇವಸ್ಥಾನದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಇದೇ ಸಂದರ್ಭದಲ್ಲಿ ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಘಟಕಕ್ಕೆ ಭೇಟಿ ಡಿ. ಆರ್. ಪಿ ಸರ್ವೇ ಪರಿಶೀಲಿಸಿದರು.‌ತದನಂತರ ಹಾಗೂ ಮಾಜಿ ದೇವದಾಸಿ ಮಹಿಳೆಯರ ಜತೆ ಸಮಾಲೋಚನೆ ನಡೆಸಿ, ಸ್ಚಾವಲಂಬಿ ಬದುಕು ಕಟ್ಟಿಕೊಳ್ಳುವ ಕುರಿತು ಸಲಹೆಗಳನ್ನು ನೀಡಿದರು. ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ…

Read More

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್ ಸಲಹೆ

ನ್ಯಾಯಮಿತ್ರ ಸಹಕಾರಿ ಸಂಘದ ಬೆಳಿ ಮಹೋತ್ಸವವಕೀಲರಿಗೆ ವಸತಿ ನಿವೇಶನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಮಂಜೂರು ಮಾಡಿ ಬೆಂಗಳೂರು ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ ನೀಡಿದರು. ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ…

Read More

ಸರ್ಕಾರಿ ಪ್ರೌಢಶಾಲೆ ಕಗಧಾಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ ಎ ಖಾಜಿ

ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಮತ್ತು ಫಲಿತಾಂಶ ಪಡೆಯುವುದು ಪ್ರತಿ ಶಾಲೆಯ ಮತ್ತು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು.ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಆಧರಿಸಿ ವಿಶೇಷ ಕ್ರಿಯಾ ಯೋಜನೆ ತಯಾರಿಸಿ ಬೋಧನೆ ಕೈಗೊಂಡಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನೂರಕ್ಕೆ ನೂರು ಸಾಧಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ ಎ ಖಾಜಿ ರವರು ಅಭಿಪ್ರಾಯಪಟ್ಟರು. ಸರ್ಕಾರಿ ಪ್ರೌಢಶಾಲೆ ಕಗಧಾಳಕ್ಕೆ ಆಕಸ್ಮಿಕ ಸಂದರ್ಶನ ನೀಡಿದ ಸಂದರ್ಭದಲ್ಲಿ ಶಾಲೆಯ ವತಿಯಿಂದ ಮಾಡಲಾದ ಸನ್ಮಾನ ಸ್ವೀಕರಿಸಿ ಮೇಲಿನಂತೆ…

Read More