ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿದರು.
ಸ್ವಾಮಿ ವಿವೇಕಾನಂದರು ಜಗತ್ತಿಗೆ ಧರ್ಮ ಮತ್ತು ಯೋಗವನ್ನು ಪರಿಚಯಿಸಿದರೆ, ಅವರಿಂದ ಪ್ರೇರಿತರಾದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರು ತಮ್ಮ ಚಿಂತನೆ ಮೂಲಕ ಜಗತ್ತಿಗೆ ಜ್ಞಾನ, ತತ್ವಜ್ಞಾನದ ಪರಂಪರೆಯನ್ನು ಪರಿಚಯಿಸಿದವರು ಎಂದು ಹಿರಿಯ ಶರಣ ಸಾಹಿತಿ ಪ್ರೊ| ಸಿದ್ದಣ್ಣ ಲಂಗೋಟಿ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ನೇತೃತ್ವದಲ್ಲಿ ಗುರುವಾರ ಸಂಜೆ ಬ್ಯಾಂಕ್ ಆವರಣದಲ್ಲಿ ಏರ್ಪಡಿಸಿದ್ದ ಸರ್ವಪಲ್ಲಿ ಡಾ. ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಏರ್ಪಡಿಸಿದ್ದ ಸನ್ಮಾನ…
