3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಲಕ್ಷ್ಮೀ ಹೆಬ್ಬಾಳ್ಳರ್
ಬೆಳಗಾವಿ, ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮಿ ಹೆಬ್ಬಾಳ್ಳರ್ ತಿಳಿಸಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಜವರಾಯಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯವಿದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆ ಯಡಿ ಹಂಚಿಕೆ…
