ಹಲಗತ್ತಿಯಿಂದ ಬಾಳೆಕುಂದ್ರಿ ಕಾಲುವೆವರೆಗೆ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಿಂದ ಬಾಳೆಕುಂದ್ರಿ ಕಾಲುವೆಯವರೆಗೆ ರಸ್ತೆ ತುಂಬ ಗುಂಡಿಮಯ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ಹರಿದುಹೋಗಲು ಜಾಗವಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿದೆ. ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಯಲ್ಲಿನ ಗುಂಡಿಗಳು…
