ರಾಮದುರ್ಗದಲ್ಲಿ ಹಾರೂಗೇರಿ ಪ್ರಗತಿ ಕ್ರೆಡಿಟ್ ಸೌಹಾರ್ದ ಸಂಘದ ನೂತನ ಶಾಖೆಯನ್ನು ಶ್ರೀ ಚಂದ್ರಶೇಖರ ಸ್ವಾಮೀಜಿ ಹಾಗೂ ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಹಾರೂಗೇರಿಯ ಪ್ರಗತಿ ಕ್ರೆಡಿಟ್ ಸೌಹಾರ್ದ ಸಂಘ ನಿ, ಇದರ 6ನೇ ನೂತನ ಶಾಖೆಯನ್ನು ಮುಳ್ಳೂರ ಅನ್ನದಾನೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಈ ವೇಳೆ ಹಾರೂಗೇರಿಯ ಶರಣ ವಿಚಾರ ವಾಹಿನಿ ಅಧ್ಯಕ್ಷ ಶ್ರೀ ಐ.ಆರ್. ಮಠಪತಿ ಮಾತನಾಡಿದ ಅವರು 1904 ರಲ್ಲಿ ದಿ. ಸಿದ್ದನಗೌಡ ಪಾಟೀಲ ಅವರು ಹುಟ್ಟು ಹಾಕಿದ ಸಹಕಾರ ಸಂಘಗಳು ಇಂದು ಹೆಮ್ಮರವಾಗಿ ಬೆಳೆದು ನಿಂತಿವೆ ಎಂದು ಹರ್ಷವ್ಯಕ್ತಪಡಿಸಿದರು.ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ನೂತನ…

Read More

ಗಾಂಧೀ ಜಯಂತಿ ಅಂಗವಾಗಿ : ಗಾಂಧೀ ಚಿಂತನೆಯ ಪ್ರಸ್ತುತತೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಗಾಂಧೀ ಜಯಂತಿ ಅಂಗವಾಗಿ ಬ್ಯಾಂಕ್ ಆಪ್ ಬರೋಡಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಯೋಗ ಬಳಗ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗಾಂಧೀ ಚಿಂತನೆಯ ಪ್ರಸ್ತುತತೆ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯ ಸಭಾ ಸದಸ್ಯ ಬಸವರಾಜ ಪಾಟೀಲ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಸನ್ನವೇಶದಲ್ಲಿ ಗಾಂಧೀಜಿಯವರ ಆದರ್ಶಗಳು ನಮಗೆ ಪ್ರೇರಣೆಯಾಗಬೇಕಿದೆ. ಅವರ ಆದರ್ಶದ ಮಾರ್ಗದಲ್ಲಿ ಎಲ್ಲರೂ ನಡೆದಲ್ಲಿ ಸಾಮರಸ್ಯದಿಂದ ಬದುಕಲು ಸಾಧ್ಯವಿದೆ. ನಾವೇಲ್ಲಾ ಮಹಾನ…

Read More

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಕಾರಣ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವಿಕರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರಬಜಾರದಲ್ಲಿರುವ ಗಾಂಧಿ ಪುತ್ತಳಿಗೆ ಪುಷ್ಪನಮನ ಸಲ್ಲಿಸಿ ಪಾದಯಾತ್ರೆ ಮುಖಾಂತರ ತಾಲೂಕಾ ಪಂಚಾಯತ ಶಾಸಕರ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ರಂಗನಗೌಡರ ಅವರು ಪ್ರತಿಜ್ಞೆ ವಿಧಿ ಸಲ್ಲಿಸಿ ಮಾತನಾಡಿದರು ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಕಾರಣ ವಿಜೃಂಭನೆಯಿಂದ ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ.ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾನ್ ನಾಯಕರು,…

Read More

ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯನ್ನು ಮಲ್ಲಣ್ಣ ಯಾದವಾಡ ಮಾಲಾರ್ಪಣೆ ದೊಂದಿಗೆ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ್ ಬಜಾರದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜನ್ಮ ದಿನಾಚರಣೆ ಅಂಗವಾಗಿ ಗಾಂಧಿ ಪುತ್ತಳಿಗೆ ಮಲ್ಲಣ್ಣ ಯಾದವಾಡ ಮಾಲಾರ್ಪಣೆ ಮಾಡುವುದರ ಮುಖಾಂತರ ಗಾಂಧಿ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಬೀಳಗಿ, ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಯಲ್ಲಪ್ಪ ಕುರಿ, ಬಸವರಾಜ್ ಸೋಮಗೊಂಡ, ಸಿದ್ದಪ್ಪ ಗಾಣಿಗೇರ್, ಈರಣ್ಣ ಹೊಸಕೇರಿ, ಐ.ಜಿ. ಹೊಲಿಮಠ, ಬಸವರಾಜ್ ಕೊಣನ್ನವರ, ಗುರಪ್ಪ ಮೆಣಸಿಗಿ, ಸಂಗಯ್ಯ ಬಿರ್ನೂರ್ ಮಠ, ಪ್ರೀತಮ್ ಚೀಲದ, ಗುರುರಾಜ…

Read More

ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮಹಾನಗರ ಪಾಲಿಕೆ, ಬೆಳಗಾವಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ವೀರಸೌಧದಲ್ಲಿ ಬುಧವಾರ ಜರುಗಿದ ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಕಾರ್ಯಕ್ರಮದಲ್ಲಿ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದುಕೊಂಡ ದಿನದಿಂದಲೂ ಸಹ ನಿರಂತರವಾಗಿ ಪ್ರತಿವರ್ಷ ನೆನೆದುಕೊಳ್ಳುವ ವ್ಯಕ್ತಿ ಎಂದರೆ ಅದುವೇ ರಾಷ್ಟ್ರಪಿತ…

Read More

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು.

ಬೆಂಗಳೂರು ವಿಧಾನಸೌಧ ಆವರಣದಲ್ಲಿ ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌…

Read More

87ನೇ ಅಖಿಲ ಭಾರತ ಕನ್ನಡ ಸಮ್ಮೇಳನದ ಕನ್ನಡದ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಸ್ವಾಗತಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ ಕನ್ನಡಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಅದ್ದೂರಿಯಿಂದ ಸ್ವಾಗತಿಸಿಪೂಜಾ ಕಾರ್ಯಕ್ರಮ ನೆರವೇರಿಸಿ ಮುಖ್ಯ ರಸ್ತೆಯ ಮೂಲಕವಾಗಿ ಕುಂಭ ಮೇಳ ಮೆರವಣಿಗೆಯೊಂದಿಗೆ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಸಾಗಿ ಬಿಳ್ಕೊಟ್ಟರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕು ಪಂಚಾಯತಿ ಇಒ ಪ್ರವೀಣಕುಮಾರ್ ಸಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ…

Read More

ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮ ಉದ್ದೇಶಿಸಿ ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ 4 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ ವಹಿಸಿ ಮಾತನಾಡಿ ಅವರು, ಗಾಂಧಿಜೀಯವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಕರೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿದ ಶಾಲೆಯ ಮುಖ್ಯೋಪಾಧ್ಯಾಯ ಎಂ.ಎಚ್. ಚಾಬುಕಸ್ವಾರ ಮಾತನಾಡಿ, ಗಾಂಧೀಜಿ ಇಡೀ ಜಗತ್ತಿಗೆ ಶಾಂತಿ ಮತ್ತು ಸಹೋದರತೆಯನ್ನು ಸಾರಿದರು. ಅವರ ಸ್ಮರಣೆಗಾಗಿ…

Read More

ಬುದ್ನಿ ಖುರ್ದ ಗ್ರಾಮದಲ್ಲಿ ನಡೆದ ಜಾನಪದ ಮತ್ತು ಸಂಗೀತ ಉತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬುದ್ನಿ ಖುರ್ದ ಗ್ರಾಮದ ಡಾ| ಬಿ.ಆರ್. ಅಂಬೇಡ್ಕರ್ ರಂಗ ಮಂದಿರದಲ್ಲಿ ಜಾನಪದ ಕಲಾ ಪರಿಷತ್ (ರಿ) ಹಲಗತ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡ ಜಾನಪದ ಮತ್ತು ಸಂಗೀತ ಉತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಕಲಾ ಪ್ರೇಮಿ ಶಂಕರ ಬಣಪ್ಪನವರ ಪಾಲ್ಗೊಂಡು ಮಾತನಾಡಿದರು.ಜಾನಪದ ಕಲೆ ತನ್ನದೇ ಆದ ಒಂದು ಇತಿಹಾಸ ಹೊಂದಿದೆ. ಹಳ್ಳಿಯ ಸೊಗಡಿನಲ್ಲಿ ಜಾನಪದ, ಭಜನಾ, ಸೋಬಾನ ಪದ, ರಿವಾಯತ್ ಪದ, ಸುಗಮ ಸಂಗೀತ…

Read More

ದೇಶದ ಪ್ರಗತಿಗೆ ಪ್ರವಾಸೋದ್ಯಮ ಪಾತ್ರ ದೊಡ್ಡದು : ಶಾಸಕ ಆಸೀಫ್ ಸೇಠ್

ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಕ್ಲಬ್ ಆವರಣದಲ್ಲಿ ಜರುಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆ -2024 ರ ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರವಾಸಿಗರು ವೈವಿಧ್ಯಮಯ ಪ್ರವಾಸಿ ತಾಣಗಳನ್ನು ವೀಕ್ಷಿಸಲು, ಅನ್ವೇಷಿಸಲು ಬರುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೋಟೆಗಳು, ಕೆರೆಗಳು, ಜಲಪಾತ ವಿವಿಧ ದೇವಸ್ಥಾನ ಸೇರಿದಂತೆ ಸಾಕಷ್ಟು ಪ್ರವಾಸಿ ತಾಣಗಳಿವೆ. ಉದ್ಯೋಗ ಸೃಜನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಚಾಲನಾ ಶಕ್ತಿಯಾಗಿ ಪ್ರವಾಸೋದ್ಯಮವು…

Read More