ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಸಂಸದ ಜಗದೀಶ ಶೆಟ್ಟರ್ ಮಾತನಾಡಿದರು
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಜಗದೀಶ ಶೆಟ್ಟರ್ ಅವರು ವಹಿಸಿ ಮಾತನಾಡಿದರು. ಬೆಳೆ ಪರಿಹಾರ ಕಾರ್ಯದಲ್ಲಿ ಜಂಟಿ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಿ ಆದಷ್ಟು ಬೇಗನೆ ರೈತರಿಗೆ ಬೆಳೆ ಪರಿಹಾರ ಒದಗಿಸಲು ಕ್ರಮ ಜರುಗಿಸಿ, ನೆರೆ ಹಾವಳಿಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆಗಳ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಹೇಳಿದರು. ಬೆಂಬಲ ಬೆಳೆ ಖರೀದಿ ಕೇಂದ್ರಗಳಲ್ಲಿ…
