ಗ್ರಾಮ ಪಂಚಾಯಿತ ಗ್ರಂಥಪಾಲಕರಿಗೆ ಸ್ಮಾರ್ಟಪೋನ್ಗಳನ್ನು ತಾ.ಪಂ ಇಓ ಪ್ರವೀಣಕುಮಾರ ಸಾಲಿ ವಿತರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾಭವನದಲ್ಲಿ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ತಾಲೂಕು ಪಂಚಾಯಿತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಂಥಪಾಲಕರು ಗ್ರಂಥಾಲಯಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಗ್ರಂಥಾಲಯಗಳನ್ನು ಜ್ಞಾನ ಭಂಡಾರ ಕೇಂದ್ರಗಳಂತೆ ನಿರ್ಮಾಣ ಮಾಡಬೇಕು….
