ದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಚಾರವಾಗಿ ಬಿಜೆಪಿ ನಾಯಕ ಆರೋಪಕ್ಕೆ ತಿರುಗೇಟು ನೀಡಿದ ಅವರು, ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ…
