ಬಸವೇಶ್ವರ, ವೀರಭದ್ರೇಶ್ವರ, ಸಾಲಾಪುರ ಏತ ನೀರಾವರಿ ಯೋಜನೆಗಳ ಕುರಿತು ಸಿಎಂ ಸಭೆ
ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು.ಈ ಯೋಜನೆಗೆ ಇದುವರೆಗೆ ರೂ. 1158 ಕೋಟಿ ವೆಚ್ಚ ಮಾಡಲಾಗಿದ್ದು,…
