ಬಳ್ಳಾರಿಯಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನೆರವೇರಿಸಿದರು
ಬಳ್ಳಾರಿ ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ಕಾರ್ಯಕ್ರಮವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿ ಅವರು ಮಾತನಾಡಿದರು.ರಾಷ್ಟ್ರಕ್ಕೆ ಸ್ವಾತಂತ್ರ್ಯೋತ್ಸವ ತಂದುಕೊಟ್ಟಂತಹ ಅನೇಕ ಮಹಾನ್ ಹೋರಾಟಗಾರರನ್ನು ಹಾಗೂ ಸಾವಿರಾರು ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯು ತನ್ನದೇ ಆದ ಮಹತ್ತರ ಕಾಣಿಕೆ ನೀಡಿದೆ. ಬಳ್ಳಾರಿ ಜಿಲ್ಲೆಯ ಸ್ವಾತಂತ್ರ ಹೋರಾಟವು ರಾಷ್ಟ್ರೀಯ ಭಾವೈಕ್ಯತೆಯ ಸಂಕೇತವಾಗಿತ್ತು. ಕನ್ನಡ ಹಾಗೂ ತೆಲುಗು…
