ಶಾಸಕ ಅಶೋಕ ಪಟ್ಟಣ ಅವರು ಉಚಿತವಾಗಿ ಕೊಡುಗೆ ನೀಡಿದ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ಸ್ಗಳನ್ನು ವಿದ್ಯಾರ್ಥಿಗಳಿಗೆ ವಿಶ್ವಭಾರತಿ ಪ.ಪೂ ಕಾಲೇಜಿನಲ್ಲಿ ನ್ಯಾಯವಾದಿ ಜಮುನಾ ಪಟ್ಟಣ ಅವರು ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಶ್ವಭಾರತಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟ್‌ಬುಕ್ಸ್ಗಳನ್ನು ನ್ಯಾಯವಾದಿ ಜಮುನಾ ಪ್ರದೀಪ ಪಟ್ಟಣ ವಿತರಿಸಿ ಮಾತನಾಡಿದರು ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲೆಂದು ಶಾಸಕರಾದ ಅಶೋಕ ಪಟ್ಟಣ ಅವರು ಒಂದನೇ ತರಗತಿಯಿಂದ ಪದವಿ ಹಂತದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ಸ್ ನೀಡುತ್ತಿದ್ದಾರೆ. ಶಿಕ್ಷಣದಿಂದಲೆ ದೇಶದ ಪ್ರಗತಿ ಸಾಧ್ಯವಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು. ಅವುಗಳ ಸದುಪಯೋಗ ಪಡಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು…

Read More

ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ನೇಕಾರ ಸಮುದಾಯದಿಂದ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕಾಶಿಪೇಟೆಯ ತಾರಮ್ಮ ನಾಗರಾಳ ಮತ್ತು ಮುಗಳಿ ಅವರ ನಿವಾಸದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಜ್ಯ ದೇವಾಂಗ ಸಂಘದ ಉಪಾಧ್ಯಕ್ಷ ಶಂಕ್ರಣ್ಣ ಮುರುಡಿ ಪಾಲ್ಗೊಂಡು ಮಾತನಾಡಿದರು ಖಾದಿ ಉತ್ಪನ್ನ ಬಟ್ಟೆಗಳಿಗೆ ಸರಕಾರ ಪೂರಕ ವಾತಾವರಣ ಕಲ್ಪಿಸುವ ಮೂಲಕ ನಸಿಸಿ ಹೋಗುತ್ತಿರುವ ಕೈಮಗ್ಗ ನೇಕಾರಿಕೆಗೆ ಉತ್ತೇಜನ ನೀಡಬೇಕು ಕಾಲ ಬದಲಾದಂತೆ ನೇಕಾರಿಕೆಯು ಬದಲಾವಣೆ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಸರಕಾರ ವಿವಿಧ ಇಲಾಖೆ ಸಿಬ್ಬಂದಿಗೆ ಕೈಮಗ್ಗ ಉತ್ಪನ್ನಗಳ ವಸ್ತ್ರಗಳನ್ನು ಕಡ್ಡಾಯವಾಗಿ ಬಳಸುವಂತೆ ಅದೇಶ…

Read More

ನೌಕರರ ಸಂಘದ ನೇತೃತ್ವದಲ್ಲಿ ನೌಕರರ ಮಕ್ಕಳಿಗೆ ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾಧನೆ ಮಾಡಿದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ನೌಕರರ ಸಭಾ ಭವನದಲ್ಲಿ ನೌಕರರ ಸಂಘದ ನೌಕರರು ಆಯೋಜಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ 2024-25 ನೇ ಸಾಲಿನಲ್ಲಿ ಎಸ್‌ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಕಾಂಗ್ರೆಸ್ ಮುಖಂಡ ಪ್ರದೀಪ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಮಹತ್ವ ನೀಡದೇ, ತಮ್ಮ ವ್ಯಾಸಂಗಕ್ಕೆ ಮಾರ್ಗದರ್ಶನ ನೀಡಿದ ಶಿಕ್ಷಕರು, ಪಾಲಕರನ್ನು ದೇವರಂತೆ ಕಾಣಬೇಕು. ಅಂದಾಗ ಎಲ್ಲರೂ ನೆಮ್ಮದಿಯ ಜೀವನ ಸಾಗಿಸಲು ಸೂಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಮಾತನಾಡಿ,…

Read More

ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ನೇಕಾರಿಕೆ ಸನ್ಮಾನ…

ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಈಳಗೇರ ಇವರ ನೇತೃತ್ವದಲ್ಲಿ ಸನ್ಮಾನ್ಯ ಶ್ರೀ ಚಿಕ್ಕರೇವಣ್ಣರವರ ಮತಕ್ಷೆತ್ರ ಆದಕಟಕೋಳ ಗ್ರಾಮದಲ್ಲಿ ಸ್ವದೇಶಿ ಸಂಪ್ರದಾಯದಂತೆ ಕೈಮಗ್ಗದ ಮೂಲಕ ನೇಕಾರಿಕೆ, ಮಾಡುವ ತಾಯಂದಿರಿಗೆ ಶ್ರೀಮತಿ ಶಾಲಿನಿ ಈಳಗೇರ ಮೇಡಮ್ ಹಾಗೂ ರಾಮದುರ್ಗ ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು… ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮಹಿಳಾ ಮೋರ್ಚಾದ ಉಪಾಧ್ಯಕ್ಷ ಶ್ರೀಮತಿ ಶಾಲಿನಿ ಈಳಗೇರ ಇವರು ನಮ್ಮ ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷ…

Read More

ಕಾರ್ಮಿಕ ಕಲ್ಯಾಣ ಮಂಡಲಿಗೆ : ಹೆಚ್.ಜಿ.ರಮೇಶ್ ಸದಸ್ಯ

ಕುಣಿಗಲ್: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಲಿಯ ಸದಸ್ಯರಾಗಿ ತುಮಕೂರು ಜಿಲ್ಲಾ ಐಎನ್‌ಟಿಯುಸಿ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ.ರಮೇಶ್ ಅವರು ನೇಮಕ ಮಾಡಲಾಗಿದೆ. ಕುಣಿಗಲ್ ತಾಲೂಕಿನವರಾದ ಹೆಚ್.ಜಿ.ರ ಮೇಶ್ ಅವರು ಕಾರ್ಮಿಕರ ಕಲ್ಯಾಣ ಅಭಿವೃದ್ಧಿಗಾಗಿ ಶ್ರಮಿಸಿರುವ ಅವರ ಸೇವೆಯನ್ನು ಗುರುತಿಸಿ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಸುಮಾ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಲಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹೆಚ್.ಜಿ,ರಮೇಶ್ ಮಾಜಿ ಸಚಿವ ವೈ. ಕೆ.ರಾಮಯ್ಯ…

Read More

ಗೃಹ ಲಕ್ಷ್ಮಿ ಹಣ ಸಮರ್ಪಕವಾಗಿ ಮಂಜೂರು ಮಾಡುವಂತೆ ಆಗ್ರಹಿಸಿ- ಸರ್ಕಾರಕ್ಕೆ ಪತ್ರ ಅಭಿಯಾನ

ವಿಜಯನಗರ ಜಿಲ್ಲೆ: ಕೊಟ್ಟೂರು ತಾಲೂಕು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕು ವ್ಯಾಪ್ತಿಯ, ವಿವಿದ ಗ್ರಾಮಗಳ ಉಧ್ಯೋಗ ಖಾತರಿ ಯೋಜನೆ ಫಲಾನುಭವಿಗಳು. ಕೆಲ ಗ್ರಾಮಗಳ ಬಡ ಕೂಲಿ ಕಾರ್ಮಿಕ ಮಹಿಳೆಯರು, ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು. ಗೃಹ ಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಹಿಸಿ, ಸಚಿವರಿಗೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ರಿಜಿಸ್ಟರ್ ಪೋಸ್ಟ್ ಮಾಡಿ ಅಭಿಯಾನ ನಡೆಸಿದ್ದಾರೆ. ಅವರು ಪತ್ರಕರ್ತರೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ತಮ್ಮ ಖಾತೆಗೆ ಯೋಜನೆಯ ಹಣ ಮಂಜೂರಾಗಿಲ್ಲ. ಕಾರಣ…

Read More

ಶ್ರಾವಣದಲ್ಲಿ ವಿಶೇಷ ಪೂಜಿತನಾಗುವ ರಡ್ಡೇರಹಟ್ಟಿಯ ಮಟ್ಟಿ ಬಸವೇಶ್ವರ

ಶ್ರಾವಣ ಮಾಸ ಬಂತೆಂದರೆ ಸಾಕು ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಪ್ರಾರಂಭವಾಗಿ ಮಾಸಾಂತ್ಯ ವಿಶೇಷ ಪ್ರಾರ್ಥನೆಯ ಕೇಂದ್ರಗಳಾಗುತ್ತವೆ. ಆದರೆ ದೂರದ ನದಿಯಿಂದ ನೀರು ತಂದು ಅದರ ಮೂಲಕವೇ ಪೂಜೆಗೊಳ್ಳುವ ವಿಶೇಷವೊಂದು ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ಮಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಇಂದಿಗೂ ಆಚರಣೆ ಇದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನಡೆದು ಬಂದಿರೋದು ವಿಶೇಷ ಸಾಂಪ್ರದಾಯ, ಶ್ರಾವಣ ಮಾಸದ ಪ್ರತಿ ಸೋಮವಾರ ನಸುಕಿನ ಜಾವ ನಾಲ್ಕು ಗಂಟೆಗೆ ಎದ್ದು ಸುಮಾರು ಏಳು ಕಿ.ಮೀ ದೂರವಿರುವ…

Read More

ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ : ಸಿಎಂ ಸಿದ್ದರಾಮಯ್ಯ

ಬೆಳಗಾವಿ ಜಿಲ್ಲೆ ಗೋಕಾಕ ಪಟ್ಟಣದ ವಿವಿಧ ಪ್ರದೇಶಗಳು ಮತ್ತು ಗಂಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ…

Read More

ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ : ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ…

Read More

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ಬೆಳಗಾವಿಯಲ್ಲಿ ಆ.6 ರಂದು ಬೃಹತ್ ಪ್ರತಿಭಟನೆ

ಬೆಟಗೇರಿ:ಮುಡಾ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೆಸರು ತಳಕು ಹಾಕಿದ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಬೆಳಗಾವಿ ಜಿಲ್ಲೆಯ ಎಲ್ಲಾ ಶೋಷಿತ ಸಮುದಾಯದ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಸಿದ್ಧರಾಮಯ್ಯನವರ ಅಭಿಮಾನಿ ಬಳಗದ ಸಹಯೋಗದಲ್ಲಿ ಬೆಳಗಾವಿ ಮಹಾನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಗಸ್ಟ್ ೬ ರಂದು ಮುಂಜಾನೆ ೧೧ಗಂಟೆಗೆ ಬಿಜೆಪಿ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳÀ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹಾಗೂ…

Read More