ಡಾ.ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ
ಬೆಳಗಾವಿ ಡಾ. ರಾಜಕುಮಾರ್ ಅವರ ಸರಳ, ಸಜ್ಜನಿಕೆ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದು, ಜನರೊಂದಿಗಿನ ಸರಳ ಒಡನಾಟದಿಂದಾಗಿ ಅವರು ಇಂದಿಗೂ ಕನ್ನಡಿಗರ ಮನದಲ್ಲಿ ಮರೆಯದೇ ಉಳಿದಂತಹ ಮಹಾನ್ ಚೇತನರಾಗಿದ್ದಾರೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ ಅವರು ಹೇಳಿದರು. ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ವಾರ್ತಾ ಭವನದಲ್ಲಿ ಆಯೋಜಿಸಲಾಗಿದ್ದ ವರನಟ ಡಾ.ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜಕುಮಾರ್ ಅವರು ಉತ್ತಮ ನಟ, ಗಾಯಕರಾಗಿದ್ದರು. ಅವರ…
