ರಾಮದುರ್ಗ ತೇರ್ ಬಜಾರ ಅಂಚೆ ಕಚೇರಿ ವಿಲೀನ ವಿರೋಧಿಸಿ ವಿಜಯ ಸೇನಾ ಸಮಿತಿ ವತಿಯಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ್ ಬಜಾರ (ಯಾನಮಪೇಟೆ) ದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೌನ್ ಅಂಚೆ ಕಚೇರಿಯನ್ನು ಪ್ರಧಾನ ಅಂಚೆ ಕಚೇರಿಗೆ ವಿಲೀನಗೊಳಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರು ಹಾಗೂ ವಿಜಯ್ ಸೇನಾ ಸಮಿತಿ ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಗೊಂಡಿದೆ. ಏಪ್ರಿಲ್ 16 ರಂದು ಬೆಳಿಗ್ಗೆಯಿಂದ ರಾಮದುರ್ಗ ಪ್ರಧಾನ ಅಂಚೆ ಕಚೇರಿಯ ಎದುರು ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ವಿಜಯ ಸೇನಾ ಸಮಿತಿಯ ಮುಖಂಡ ವಿಜಯ…
