ವಿವಿಧ ಇಲಾಖೆಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ
2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳ 6ನೇ ತರಗತಿಗೆ ಎರಡು ವಿಧಾನಗಳ ಮೂಲಕ ದಾಖಲಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಶೇ.50 ಸ್ಥಾನಗಳನ್ನು ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಹಾಗೂ ಶೇ.50 ರಷ್ಟು ಸ್ಥಾನಗಳನ್ನು ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಕಲ್ಪಿಸಲಾಗಿದೆ. ವಿಶೇಷ ವರ್ಗಗಳ: ಸಫಾಯಿ ಕರ್ಮಚಾರಿ, ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಚಿಂದಿ ಆಯುವವರು, ಸ್ಮಶಾನ…
