ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಜ್ಞಾನ ವೃದ್ಧಿಗೆ ಸಹಕಾರಿ : ಬಿ.ಪಿ. ಮಾಳಗಿ
ಬೆಳಗಾವಿ: ಮಹಾಂತೇಶ ನಗರ ರಹವಾಸಿಗಳ ಸಂಘ, ಭಾರತ ಸರ್ಕಾರದ ಅಂಚೆ ಇಲಾಖೆ ಹಾಗೂ ಬೆಳಗಾವಿ ಅಂಚೆಚೀಟಿ ಮತ್ತು ನಾಣ್ಯ ಸಂಗ್ರಹಣಾ ಸಂಘದ ಸಂಯುಕ್ತಾಶ್ರಯದಲ್ಲಿ “ಸಂಚಯ” ಹೆಸರಿನ ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯ ಪ್ರದರ್ಶನ ಕಾರ್ಯಕ್ರಮವು ಸೋಮವಾರ ಮಹಾಂತೇಶ ನಗರದ ಮಹಾಂತ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿಭಾರತ ಸರ್ಕಾರ ಅಂಚೆ ಇಲಾಖೆ ಬೆಳಗಾವಿ ಅಧೀಕ್ಷಕರಾದ ಬಿ.ಪಿ. ಮಾಳಗಿ ಮಾತನಾಡಿ,“ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯು ಜ್ಞಾನ ವೃದ್ಧಿಗೆ ಸಹಕಾರಿಯಾಗಿದೆ. ವಿವಿಧ ಕಾಲಘಟ್ಟಗಳಲ್ಲಿ ನಡೆದ ಮಹತ್ವದ ಘಟನೆಗಳಿಗೆ ಇವು ಕೈಗನ್ನಡಿಯಂತಿದ್ದು, ಉತ್ತಮ…
