ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ವಹಿಸಿ ಅವರು ಮಾತನಾಡಿದರು. ಸರಕಾರಿ ಶಾಲಾ ಮಕ್ಕಳು ನಿಯಮಿತವಾಗಿ ಶಾಲೆಗೆ ಹಾಜರಾಗುವಂತಂಹ ಪೂರಕ ವಾತಾವರಣ ನಿರ್ಮಿಸಲು ಶಾಲಾ ಶಿಕ್ಷಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ಎಸ್.ಡಿ.ಎಂ.ಸದಸ್ಯರೊಂದಿಗೆ ಸಮನ್ವಯ ಸಾಧಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು. ಸರಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಆಗುತ್ತಿರುವದಕ್ಕೆ ಕಾರಣಗಳನ್ನು ಹುಡುಕಿ ಅವುಗಳ ಪರಿಹಾರಕ್ಕೆ ಕ್ರಮಗಳನ್ನು…
