ಗಾಂಧಿಭಾರತ ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು

ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ” ಗಾಂಧಿಭಾರತ” ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿಅನಾವರಣಗೊಳಿಸಿದರು.ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.ಮುಂಬರುವ 2025 ರ ಅಕ್ಟೋಬರ್ 2 ರವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ…

Read More

ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಸ್ವಾಧೀನಪಡಿಸಿಕೊಂಡ ಲೋಕೋಪಯೋಗಿ ಇಲಾಖೆ ಹೈಕೋರ್ಟ ಆದೇಶದಂತೆ ಭೂ ಮಾಲಿಕರಿಗೆ ಪರಿಹಾರ ನೀಡದಿರುವ ಕಾರಣದಿಂದಾಗಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಪ್ತ ಮಾಡಿದರು ರಾಮದುರ್ಗ ಪಟ್ಟಣದ ನ್ಯಾಯವಾದಿ ಶಿವಾನಂದ ಸಾಗಶೆಟ್ಟಿ ಅವರ ಮಾಲಿಕತ್ವದ ಜಮೀನನ್ನು ಲೋಕೋಪಯೋಗಿ ಇಲಾಖೆ ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಸ್ವಾಧೀನ ಪಡಿಸಿಕೊಂಡಿತ್ತು. ಸರಕಾರ ನೀಡುತ್ತಿರುವ ಪರಿಹಾರ…

Read More

ರಾಮದುರ್ಗ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಖ್ಯಾತ ವೈದ್ಯ ಡಾ.ಮಲ್ಲಿಕಾರ್ಜುನ ಖಾನಪೇಟ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪರಪ್ಪ ಮುತ್ಯಾರ 2ನೇ ತಾಲೂಕು ಮಟ್ಟದ ಉಚಿತ ಆರೋಗ್ಯತ ಪಾಸಣೆ ಮತ್ತು ಔಷಧ ವಿತರಣೆ ಕಾರ್ಯಕ್ರಮ ಹಾಗೂ ಹಿರಿಯ ವೈಧ್ಯರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಬೆಳಗಾವಿಯ ಖ್ಯಾತ ವೈದ್ಯ ಡಾ.ಮಲ್ಲಿಕಾರ್ಜುನ ಖಾನಪೇಟ ಸಮಾರಂಭ ಉದ್ಘಾಟಿಸಿ, ಶಿಬಿರದಲ್ಲಿ ದೊರೆಯುವ ಚಿಕಿತ್ಸೆ, ಔಷಧ ವಿತರಣೆ, ಶಸ್ತçಚಿಕಿತ್ಸೆ ಸೇರಿದಂತೆ ಆರೋಗ್ಯ ರಕ್ಷಣೆ ಕುರಿತು ಅನುಸರಿಸಬೇಕಾದ ದೈನಂದಿನ ಚಟುವಟಿಕೆಗಳ ಮಾಹಿತಿ ನೀಡಿದರು. ನಿಸರ್ಗ ತಜ್ಞ ಡಾ. ಎಚ್.ಟಿ. ಮಳಲಿ…

Read More

ಬೆಳಗಾವಿ ವಿಜ್ಞಾನ ‌ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ವೀಕ್ಷಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ‌ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಭಾನುವಾರ ವೀಕ್ಷಿಸಿದರು. ಕಾಮಗಾರಿಗಳನ್ನು ವೀಕ್ಷಿಸಿ ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಭಾಧ್ಯಕ್ಷರು ಮಕ್ಕಳಿಗೆ ಆಟದ ಜೊತೆ ವಿಜ್ಞಾನದ‌ ಪಾಠ ಹೇಳುವ ಕಾರ್ಯದ ಕುರಿತು ಮೆಚ್ಚುಗೆ‌ ವ್ಯಕ್ತ ಪಡಿಸಿದರು. ಈ ವೇಳೆ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ವಿಜ್ಞಾನ ಪಾರ್ಕನಲ್ಲಿ…

Read More

ಬೆಳಗಾವಿ ಸುವರ್ಣಸೌಧದೊಳಗೆ ಅನುಭವ ಮಂಟಪದ ವೈಭವ : ಯು. ಟಿ. ಖಾದರ್ ಅವರಿಂದ ಇತಿಹಾಸದ ಮರುಸೃಷ್ಟಿ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿರುವುದು. ಇದು…

Read More

ವಿಜಯನಗರ ಜಿಲ್ಲಾಮಟ್ಟದ ಯುವಜನೋತ್ಸವ ಯಶಸ್ವಿ

ಹೊಸಪೇಟೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವಿಜಯನಗರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ವಿಜಯನಗರ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್. ಎನ್. ಎಫ್. ಇಮಾಮ್ ನಿಯಾಜಿ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಜನೋತ್ಸವ ತುಂಬಾ ಸೊಗಸಾಗಿ ನಡೆದಿದೆ, ಸರಕಾರ ಮಟ್ಟದಲ್ಲಿ ಅಗತ್ಯ ತರಬೇತಿ ಮತ್ತು ಸೌಲಭ್ಯ ಒದಗಿಸಲು…

Read More

ಸವದತ್ತಿಯಲ್ಲಿ ವಕೀಲರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಹೊಸ ಸಭಾ ಭವನದಲ್ಲಿ ವಕೀಲರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸವದತ್ತಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ ಎಮ್ ಎನ್ ಮುತ್ತಿನ ವಕೀಲವರು ವಹಿಸಿದ್ದರು. ಕಾರ್ಯಕ್ರಮ ಉದ್ಗಾಟಣೆಯನ್ನು ಗೌರವಾನಿನ್ವತ ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾದೀಶರಾದ ಶ್ರೀ ಶಶಿಧರ ಎಮ್ ಗೌಡ ಉದ್ಗಾಘಟನೆಯನ್ನು ದೀಪ ಬೆಳಗಿಸುವದರ ಮುಖಾಂತರ ಉದ್ದಾಟಿಸಿದರು, ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಒಂದನೇಯ ಹೆಚ್ಚುವರಿ ದಿವಾಣಿ ನ್ಯಾಯಾದೀಶರಾದ ಶ್ರೀ ಸಿದ್ರಾಮ ರೆಡ್ಡಿ ವಹಿಸಿದ್ದರು. ಮತ್ತು ಸಹಾಯಕ ಸರಕಾರಿ…

Read More

ಬೆಂಗಳೂರಿನ ಕಿಂಗ್‌ಫಿಶರ್ ಟವರ್‌ನಲ್ಲಿ ಮನೆ ಖರೀದಿಸಿದ ನಾರಾಯಣ ಮೂರ್ತಿ, ಬೆಲೆ ಎಷ್ಟು?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಖರೀದಿ ಸುಲಭದ ಮಾತಲ್ಲ. ಅದರಲ್ಲೂ ಪ್ರತಿಷ್ಠಿತ ಏರಿಯಾಗಳಲ್ಲಿ ಮನೆ ಬೇಕಾದರೆ ದುಬಾರಿ ಬೆಲೆ ನೀಡಬೇಕು. ಸಾವಿರಾರು ಕೋಟಿ ರೂಪಾಯಿ ಒಢೆಯ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಿಂಗ್‌ಫಿಶರ್ ಟವರ್‌ನಲ್ಲಿ ಮನೆ ಖರೀದಿಸಿದ್ದಾರೆ. ನಾರಾಯಣ ಮೂರ್ತಿ 16ನೇ ಮಹಡಿಯಲ್ಲಿರುವ ಈ ಮನೆ ಖರೀದಿಸಿದ್ದಾರೆ. ವಿಶೇಷ ಅಂದರೆ ಇದೇ ಟವರ್‌ನ 23ನೇ ಮಹಡಿಯಲ್ಲಿ ಸುಧಾ ಮೂರ್ತಿ ಮನೆ ಇದೆ. ನಾರಾಯಣ ಮೂರ್ತಿ ಖರೀದಿಸಿದ ಮನೆ ಬರೋಬ್ಬರಿ 8,400 ಚದರ…

Read More

ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ಜರುಗಿದ‌ ಪತ್ರಿಕಾ ಗೋಷ್ಠಿಯಲ್ಲಿ ಬಸವರಾಜ ಹೊರಟ್ಟಿ ಮಾತನಾಡಿದರು. ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಈ ಬಾರಿ ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ…

Read More

ಪ್ರಸಕ್ತ ಸಾಲಿನ ಚಳಿಗಾಲದ‌ ಅಧಿವೇಶನದಲ್ಲಿ ಯಾವುದೇ ಲೋಪಗಳು ಆಗದಂತೆ ಎಲ್ಲ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ‌‌‌ ಮೊಹಮ್ಮದ್ ರೋಷನ್ ಅವರು‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸುವರ್ಣ ವಿಧಾನಸೌಧದಲ್ಲಿ ನಡೆದಿರುವ ವಿವಿಧ ಸಿದ್ಧತಾ ಕೆಲಸಗಳನ್ನು, ಸ್ವಚ್ಛತಾಕಾರ್ಯವನ್ನು ಮತ್ತು ಸಂಪರ್ಕ‌ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗುರುವಾರ ನಡೆದ ಚಳಿಗಾಲ ಅಧಿವೇಶನ-2024 ಸಿದ್ಧತೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ‌‌‌ ಮೊಹಮ್ಮದ್ ರೋಷನ್ ವಹಿಸಿ ಅವರು‌ ಮಾತನಾಡಿದರು. ಚಳಿಗಾಲ‌ ಅಧಿವೇಶನ ಕುರಿತಂತೆ ಈಗಾಗಲೇ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಎಲ್ಲ‌ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು.ಅಧಿವೇಶನಕ್ಕೆ ಆಗಮಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಎಲ್ಲ‌ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಡಿ.9…

Read More