ಕನಕದಾಸರ ಜಯಂತ್ಯೋತ್ಸವ ಹಾಗೂ ಡೊಳ್ಳೋತ್ಸವ ಕಾರ್ಯಕ್ರಮಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಂಗೋಳ್ಳಿ ರಾಯಣ್ಣ ಸರ್ಕಲ್ನಿಂದ ಪ್ರಾರಂಭವಾದ ಸಂತ ಶ್ರೇಷ್ಠ ಕನಕದಾಸರ 537 ನೇ ಜಯಂತ್ಯೋತ್ಸವ, ಡೊಳ್ಳೋತ್ಸವ ಹಾಗೂ ಕುಂಭಮೇಳ ಮೆರವಣಿಗೆಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜ ಬಾಂಧವರು ಕನಕದಾಸರ ತತ್ವಗಳನ್ನು ಜೀವನದಲ್ಲಿ ಅಳವಡಿಕೆ ಮಾಡಿಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಸಮಾಜದ ಬೇಡಿಕೆಗಳಿಗೆ ತಮ್ಮ ಕೈಲಾದಷ್ಟು ಸಹಾಯ ಸಹಕಾರ ನೀಡುವುದಾಗಿ ಭರವಸೆ…
