ರಾಮದುರ್ಗ ತಾಲೂಕಿನ ಸುರೇಬಾನ, ಮುಳ್ಳೂರು ಗ್ರಾಮದಲ್ಲಿ ಹೆಚ್ಚಿದ ಮಟ್ಕಾ ದಂಧೆ…!
ಮಟ್ಕಾದಿಂದ ಅನೇಕ ಕುಟುಂಬಗಳು ಬೀದಿ ಪಾಲಾದರೆ, ಕೆಲ ಯುವಕರು ಮಟ್ಕಾದಿಂದ ಹಣ ಕಳೆದುಕೊಂಡು ಊರು ಬಿಟ್ಟು ಹೋಗಿರುವ ಉದಾಹರಣೆಗಳು ಇವೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ, ಮುಳ್ಳೂರು ಭಾಗದಲ್ಲಿನಡೆಯುತ್ತಿರುವ ಮಟ್ಕಾ ದಂಧೆಗೆ ಕಡಿವಾಣ ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ ? ಮಟ್ಕಾ ದಂಧೆ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಮೌನ ವಹಿಸಿದೆ. ಮಟ್ಕಾ ದಂಧೆಯಿಂದ ಅನೇಕ ಬಡ ಕುಟುಂಬಗಳು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ. ಕೆಲವರು ತಾವೇ ಮುಂದು ನಿಂತುಕೊಂಡು ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ.
