ಚನ್ನಮ್ಮನ ಕಿತ್ತೂರು ಉತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಾಸಕ ಬಾಬಾಸಾಹೇಬ ಪಾಟೀಲ ಸೂಚನೆ
ಬೆಳಗಾವಿ ಜಿಲ್ಲೆ ಬೈಲಹೊಂಗಲ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜರುಗಿದ ಚನ್ನಮ್ಮನ ಕಿತ್ತೂರು ಉತ್ಸವ-2024 ಮತ್ತು ಚನ್ನಮ್ಮನವರ 200ನೇ ವಿಜಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ವಹಿಸಿ ಮಾತನಾಡಿದರು. ಚನ್ನಮ್ಮನ ಕಿತ್ತೂರು ಉತ್ಸವ-2024 ಕಾರ್ಯಕ್ರಮ ಯಶಸ್ವಿಗಾಗಿ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಪ್ರಸಕ್ತ ಸಾಲಿನ ಉತ್ಸವವನ್ನು ಯಾವುದೇ ರೀತಿಯ ಲೋಪಗಳಾಗದಂತೆ ಯಶಸ್ವಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.ಮೂರು…
