ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ…
