ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ
ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.೯ರಂದು ನಡೆದ…
