ಡೆಂಗ್ಯೂ ಪ್ರಕರಣ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕರಿಸಬೇಕು: ಡಿಎಚ್ಓ: ಡಾ. ಶಶಿ ಪಾಟೀಲ
ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಪ್ರಕರಣಗಳ ಕುರಿತು ಜಾಗೃತಿ. ಸಾಂಕ್ರಾಮಿಕ ರೋಗಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಸಹಕರಿಸಬೇಕು. ಡೆಂಗ್ಯೂ ಜ್ವರ ವೈರಸ್ ನಿಂದ ಉಂಟಾಗುವ ಖಾಯಿಲೆ, ಇದು ಸೋಂಕು ಹೊಂದಿದ ಈಡಿಸ್ ಇಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯ ವಾಗಿ ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ರೋಗ ನಿಯಂತ್ರಣಕ್ಕಾಗಿ ಸೊಳ್ಳೆಗಳ…
