ಬಾಗಲಕೋಟೆ 21866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೊನೆಯ 23ನೇ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಒಟ್ಟು 97941 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 76075 ಮತಗಳನ್ನು ಪಡೆಯುವ ಮೂಲಕ ಸೋತಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು…
