ಲೋಕಸಭಾ ಚುನಾವಣೆಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ: ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ
ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ನಗರದ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಗೊಡೌನ್ ದಲ್ಲಿರುವ ಎಲೆಕ್ಟ್ರಾನಿಕ ಮತ ಯಂತ್ರಗಳನ್ನು ಬಿಗಿಭದ್ರತೆಯೊಂದಿಗೆ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕಳುಹಿಸಲಾಯಿತು. ರ್ಯಾಂಡಮೈಜೇಷನ್ ಪ್ರಕ್ರಿಯೆಯಲ್ಲಿ ಹಂಚಿಕೆಗೊಂಡಿರುವ ಮತಯಂತ್ರಗಳನ್ನು ಜಿಪಿಎಸ್ ಆಧಾರಿತ ವಾಹನಗಳ ಮೂಲಕ ಪೊಲೀಸ್ ಭದ್ರತೆಯೊಂದಿಗೆ ಮಂಗಳವಾರ ಮಧ್ಯರಾತ್ರಿಯವರೆಗೆ ರವಾನೆ ಮಾಡಲಾಯಿತು. ಆಯಾ…
