ಯುವಕನ ಕೊಲೆಯನ್ನು ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಕೊಲೆ ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಕೊಲೆಯಾದವನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕೆಂದು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಸಿಪಿಐ(ಎಂ)ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ್…
