ಸವದತ್ತಿ ಪೊಲೀಸ್ ಠಾಣೆ ಆವರಣದಲ್ಲಿ ಮೊಹರಂ ಹಬ್ಬದ ಪೂರ್ವಭಾವಿ ಶಾಂತಿ ಸಭೆ.
ಬೆಳಗಾವಿ ಜಿಲ್ಲೆ ಸವದತ್ತಿ ನಗರದಪೊಲೀಸ್ ಠಾಣೆ ಆವರಣದಲ್ಲಿಮುಂಬರುವ ಮೊಹರಂ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿ, ಕೋಮು ಸೌಹಾರ್ದತೆಯನ್ನು ಎತ್ತಿಹಿಡಿಯುವ ಮೂಲಕ ಈ ಬಾರಿ ಹಬ್ಬವನ್ನು ಸಂಪ್ರದಾಯದಂತೆ ಸಾಮರಸ್ಯದಿಂದ ಆಚರಿಸಲು ಒಮ್ಮತದಿಂದ ನಿರ್ಧರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ ಸುರೇಶ ಬೆಂಡೆಗುಂಬಳ ಅವರು, ಸವದತ್ತಿ ನಗರವು ದಶಕಗಳಿಂದ ಹಿಂದೂ ಮುಸ್ಲಿಂ ಬಾಂಧವ್ಯ ಮತ್ತು ಐಕ್ಯತೆಗೆ ಹೆಸರಾಗಿದೆ. ಇಲ್ಲಿನ ಜನರು ಎಲ್ಲ ಹಬ್ಬಗಳನ್ನು…
