ಎಇಇ ಅಜಯಸಿಂಗ್ ರಜಪೂತ ನಿವಾಸದ ಮೇಲೆ ಲೋಕಾಯುಕ್ತ ದಾಳಿ : 14 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಬೆಳಗಾವಿ : ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಅಜಯಸಿಂಗ್ ಬಾಪುಸಿಂಗ್ ರಜಪೂತ ಅವರ ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಜಪೂತ ಅವರ ಮನೆ, ಕಚೇರಿ ಹಾಗೂ ಬ್ಯಾಂಕ್ ಲಾಕರ್ ಸೇರಿದಂತೆ ಒಟ್ಟು ಏಳು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು…
