ಹಿರಿಯ ಐಎಎಸ್ ಅಧಿಕಾರಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ…
