ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು
ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ? ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ…
