ಕಲಹಾಳ ಶಾಲೆ ಆವರಣದಲ್ಲಿ ಅಕ್ರಮ ಶೆಡ್‌ಗಳಲ್ಲಿ ವಾಸವಿರುವ ದಲಿತ ಕುಟುಂಬಗಳಿಗೆ ಪರ್ಯಾಯ ನಿವೇಶನದ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದ ಜಾಗೆಯಲ್ಲಿ ಅಕ್ರಮ ಶೆಡ್‌ಗಳಲ್ಲಿ ವಾಸವಿರುವ ದಲಿತ ಕುಟುಂಬಗಳಿಗೆ ಪರ್ಯಾಯ ನಿವೇಶನದ ವ್ಯವಸ್ಥೆ ಕಲ್ಪಿಸಿ, ಶಾಲಾ ಮಕ್ಕಳಿಗೆ ಆಗುತ್ತಿರುವ ಅಡಚಣೆಯನ್ನು ತಪ್ಪಿಸುವಂತೆ ಒತ್ತಾಯಿಸಿ ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.ಎರಡು ದಶಕದ ಹಿಂದೆ ಅತೀಯಾಗಿ ಮಳೆ ಸುರಿದಿದ್ದರಿಂದ ದಲಿತ ಸಮುದಾಯದ ಓಣಿಯಲ್ಲಿ ಮಳೆ ನೀರು ನುಗ್ಗಿದ ಪರಿಣಾಮ ನಿರಾಶ್ರಿತರಾದ ಸುಮಾರು 10 ಕುಟುಂಬಗಳಿಗೆ…
