ಬಿಮ್ಸ್ ಆಸ್ಪತ್ರೆಗೆ ಪ್ರಾದೇಶಿಕ ಆಯುಕ್ತೆ ಜಾನಕಿ ಭೇಟಿ: ಅಧಿಕಾರಿಗಳ ಸಭೆ.
ಬೆಳಗಾವಿ ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು ಮತ್ತು ಅಸಹಾಯಕರು. ಅವರಿಗೆ ಉತ್ತಮವಾದ ಚಿಕಿತ್ಸೆ ಜೊತೆಗೆ ಆರೈಕೆಯು ನಮ್ಮೆಲ್ಲರ ಮೊದಲ ಆದ್ಯತೆಯಾಗಿದ್ದು, ಅವರಿಗೆ ನೀಡುವ ಚಿಕಿತ್ಸೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲ ವಿಭಾಗದಲ್ಲಿಯೂ ಉತ್ತಮವಾದ ಚಿಕಿತ್ಸೆ ನೀಡುವುದರ ಜತೆಗೆ ರೋಗಿಗಳೊಂದಿಗೆ ಸಂಯಮದಿಂದ ವರ್ತಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ. ಸೂಚನೆ ನೀಡಿದರು. ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪ್ರತೆಯಲ್ಲಿ ಶುಕ್ರವಾರ ಆಡಳಿತ ಮಂಡಳಿಯ ಪ್ರಗತಿ ಪರಿಶಿಲನಾ ಸಭೆಯಲ್ಲಿ ಅವರು ಮಾತನಾಡಿದರು….
