ಧಾರವಾಡ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಧಾರವಾಡ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಉದ್ಘಾಟಿಸಿ, ಮಾತನಾಡಿದರು. 12 ನೇ ಶತಮಾನದ ಬಸವಣ್ಣನವರ ಸಮಕಾಲಿನ ಶ್ರೇಷ್ಠ ವಚನಗಾರರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಒಬ್ಬರು. ಇಂತಹ ಮಾಹಾನ್ ವ್ಯಕ್ತಿಗಳ ಆದರ್ಶಗಳನ್ನು ಇಂದಿನ ಸಮಾಜ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಗಂಗಮತಸ್ಥರ ಹಿತರಕ್ಷಕ ಸಂಘದ ಅಧ್ಯಕ್ಷ ಅರವಿಂದ ಏಗನಗೌಡರ ಅವರು ಮಾತನಾಡಿ,…

Read More

ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಬೆಳಗಾವಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ ಅನಾವರಣಗೊಳಿಸಿದರು. ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ‌ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ‌ ಕರ್ನಾಟಕಕ್ಕೆ‌ ಗೌರವ ತಂದಿದೆ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ಹಾಗೂ…

Read More

13 ಕೋಟಿ ರೂ ವೆಚ್ಚದಲ್ಲಿ ಜ.20 ರಂದುಹಿಡಕಲ್‌ ಜಲಾಶಯದ ಆವರಣದಲ್ಲಿ ಬೆಳಗಾವಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯಕ್ಕೆ ಶಂಕುಸ್ಥಾಪನೆ ಜರಗಲಿದೆ

ಬೆಂಗಳೂರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಯೋಜನೆಗಳ ಅಡಿಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್‌ ಜಲಾಶಯದ ಆವರಣದಲ್ಲಿ ಬೆಳಗಾವಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ…

Read More

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ಅವಿರೋಧವಾಗಿ ಆಯ್ಕೆ

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ನೂತನವಾಗಿ ಆಡಳಿತ ಮಂಡಳಿಗೆ ಚುನಾವಣೆಯು ದಿನಾಂಕ : 24-01-2025 ರಂದು ಚುನಾವನೆ ನಡೆಯಲಿದ್ದು ಇಂದು ದಿನಾಂಕ : 18-01-2025 ರಂದು ಸಂಘದ ಉಪಾಧ್ಯಕ್ಷರಾಗಿ ಮಹಾದೇವಪ್ಪ ಎಸ್‌ ಹುಬ್ಬಳ್ಳಿ ವಕೀಲರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮತ್ತು ಸಂಘದ ಕಾರ್ಯಕಾರಿ ಸಮಿತಿಗೆ ಆರ್‌ ವಿ ಪೂಜಾರ, ಎನ್‌ ಬಿ ಬೋವಿ, ವಿ ಆರ್‌ ಕಳ್ಳಿಮಠ, ಎ ಎಮ್‌ ಒಂಟಿ, ಮತ್ತು ವಿ ವಿ ಅಂಗಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಹಿಳಾ ವಿಭಾಗಕ್ಕೆ ಎಸ್‌ ವಾಯ್‌ ಶಿಬಾರಗಟ್ಟಿ ವಕೀಲರು ಮತ್ತು ಟ್ರಜರಿ…

Read More

ಸ್ವಾಮಿತ್ವ ಯೋಜನೆ ಮೂಲಕ 375ಗ್ರಾಮವಾಸಿಗಳ ಆಸ್ತಿ ನಿಖರತೆಗೆ ಡ್ರೋನ್ ಸಮೀಕ್ಷೆ: ಸಚಿವ ಸಂತೋಷ ಲಾಡ್.

ಧಾರವಾಡ ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲಿಕರಿಗೆ ಅವರ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಸ್ವಾಮಿತ್ವ ಯೋಜನೆಯಡಿ ಡ್ರೋನ್…

Read More

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025ವಿದ್ಯಾರ್ಥಿಗಳು ಸುರಕ್ಷತೆಯಿಂದ ವಾಹನ ಚಲಾಯಿಸಿ; ಸಂಚಾರಿ ನಿಯಮಗಳನ್ನು ಪಾಲಿಸಬೇಕು: ನೂರ್ ಮೊಹಮ್ಮದ್ ಬಾಷಾ

ಧಾರವಾಡ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ರ ಕಾರ್ಯಕ್ರಮವನ್ನುಉಪಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ನೂರ್ ಮೊಹಮ್ಮದ್ ಬಾಷಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ರಸ್ತೆ ಅಪಘಾತಕ್ಕೆ ಕಾರಣ ಹಾಗೂ ಸಂಚಾರಿ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಪೋಷಕರು ತಮ್ಮ ಮಕ್ಕಳಿಗೆ 18 ವರ್ಷ ವಯೋಮಿತಿ ಮೀರಿದ ನಂತರವೇ ವಾಹನ ಚಲಾಯಿಸುವಂತೆ ನೋಡಿಕೊಳ್ಳಬೇಕು. ಎಲ್.ಎಲ್.ಆರ್. ಹಾಗೂ ಡಿ.ಎಲ್. ಪಡೆದ ನಂತರವೇ…

Read More

ಹಾಸನ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ( ಡಿಡಿಪಿಐ) H.k ಪಾಂಡು ಲೋಕಾಯುಕ್ತ ರಿಂದ ಬಂಧನ ಮತ್ತು ಕರ್ತವ್ಯದಿಂದ ಅಮಾನತ್ತು .

ಹಾಸನ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾ..ಳಿ, ಶಿಕ್ಷಕಿ ವರ್ಗಾವಣೆಗೆ ಲಂಚ ಸ್ವೀಕರಿಸುತ್ತಿದ್ದ ಡಿಡಿಪಿಐ ಎಸ್.ಕೆ. ಪಾಂಡು ಹಾಗೂ ಕಚೇರಿ ಅಧೀಕ್ಷಕ ಎ.ಎಸ್. ವೇಣುಗೋಪಾಲ್‌ರಾವ್ 40 ಸಾವಿರ ರೂ. ಲಂಚದ ಹಣದ ಸಹಿತ ಬಲೆಗೆ. ಡಿಡಿಪಿಐ ಪಾಂಡು ಅವರು ಎ.ಎಸ್. ವೇಣುಗೋಪಾಲ್‌ರಾವ್ ಮೂಲಕ ಶಿಕ್ಷಕಿಯ ವರ್ಗಾವಣೆಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ತಿಳಿದುಬಂದು. ಈ ಸಂಬಂಧ ಶಿಕ್ಷಕಿಯ ಪತಿ ಅಭಿಜಿತ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದರು. ದೂರು ಆಧರಿಸಿ…

Read More

ಕೃಷಿ ಮಹಾವಿದ್ಯಾಲಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

ಧಾರವಾಡ ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮಹಾವಿದ್ಯಾಲಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲಬು, ರೈತರ ತಲಾ ಆದಾಯವನ್ನೂ ಇನ್ನು ಎಂಟುಪಟ್ಟು ಹೆಚ್ಚಿಸುವ ಗುರಿಯನ್ನು ಕೇಂದ್ರ…

Read More

ಸಮಾಜ ಕಲ್ಯಾಣ ಇಲಾಖೆವಿವಿಧ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಅಥವಾ ಇಲಾಖೆಯ ವೆಬಸೈಟ್ http://kea.kar.nic.in ಮತ್ತು http://kreis.kar.nic.in…

Read More

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಜ.23 ರವರೆಗೆ ಅವಧಿ

ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 64 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ 1:1 ಹಾಗೂ ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು (PROVISIONAL LIST) ದಿನಾಂಕ: 15-01-2025 ರಂದು ಬೆಳಗಾವಿ ಜಿಲ್ಲಾ ವೆಬ್ ಸೈಟ್ https://belagavi.nic.in ನಲ್ಲಿ ಪ್ರಕಟಿಸಲಾಗಿದೆ. ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ…

Read More