ಬೆಳಗಾವಿ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ- ಭೂವಿಜ್ಞಾನ ಇಲಾಖೆ ಅಧಿಕಾರಿ
ಬೆಳಗಾವಿ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಫಯಾಝ್ ಅಹ್ಮದ್ ಶೇಖ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಥಣಿ ಪಟ್ಟಣದ ನಿವಾಸಿ ಶೀತಲ್ ಗೋಪಾಲ ಸನದಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಇಲಾಖೆ ಈ ಕಾರ್ಯಾಚರಣೆ ನಡೆಸಿದೆ. ಶೀತಲ್ ಅವರ ಪರಿಚಯದ ಗುತ್ತಿಗೆದಾರ ಬಿ.ಕೆ.ಮಗದುಮ್ಮ ಅವರಿಗೆ ಐನಾಪೂರ ಗ್ರಾಮದ ಎಸ್.ಸಿ ಕಾಲೋನಿಯಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ, ಲೋಕೋಪಯೋಗಿ ಇಲಾಖೆಯ…
