ಮಾಹಿತಿ ಹಕ್ಕು ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ : ಆರ್ ಟಿ ಐ ಅರ್ಜಿ ನಿರ್ಲಕ್ಷ್ಯ ಆಯೋಗ ಕ್ರಮ.
ಬೆಂಗಳೂರು: ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರಿಂದ ಸ್ವೀಕೃತವಾಗುವ ಪ್ರಥಮ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ಧೋರಣೆ ತಾಳುತ್ತಿರುವ ಅಧಿಕಾರಿಗಳ ವಿರುದ್ಧ ಕರ್ನಾಟಕ ಮಾಹಿತಿ ಆಯೋಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಸುತ್ತೋಲೆ ಹೊರಡಿ ಸಿರುವ ಆಯೋಗ, ಮಾಹಿತಿ ಹಕ್ಕು ಅಧಿನಿಯಮ ಸೆಕ್ಷನ್4(1) ಎರ ಮಾಹಿತಿ ಮತ್ತು 4(1)ಬಿ ಅನ್ವಯ 17 ಅಂಶಗಳನ್ನು ಒಳಗೊಂಡ ಪರಿಪೂರ್ಣಗೊಳಿಸಿದ ಮಾಹಿತಿಯನ್ನು ಆಯಾ ಪ್ರಾಧಿಕಾರಿಗಳು ಪ್ರತಿ ವರ್ಷ ಡಿಸೆಂಬರ್ 31ರ ಒಳಗೆ ಇಲಾಖೆ ವೆಬ್ ಸೈಟ್‌ನಲ್ಲಿ ಪ್ರಕಟಿಸಲು ತಿಳಿಸಿದೆ. ರಾಜ್ಯದ…
