ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು….
