ರಾಮದುರ್ಗ ಬೀದಿ ದೀಪ ಅಳವಡಿಸದೆ ಪುರಸಭೆ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ.
ರಾಮದುರ್ಗ ಪಟ್ಟಣದಲ್ಲಿ ಬೀದಿ ದೀಪಗಳು ಹೋದರೂ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕತ್ತಲೆಯಾಗುತ್ತಿದ್ದಂತೆ ರಸ್ತೆಗಳಲ್ಲಿ ಓಡಾಡಲು ಮಹಿಳೆಯರು ಮತ್ತು ಮಕ್ಕಳು ಪರದಾಡುವಂತಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಾರ್ಡ ನಂಬರ್ 24ಪ್ರಮುಖ ರಸ್ತೆ, ಹಾಗೂ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳು ಇಲ್ಲದೆ ಸಾರ್ವಜನಿಕರು ಕತ್ತಲೆಯಲ್ಲಿ ಓಡಾಡುತ್ತಾರೆ.ಬೆಳಕಿನ ವ್ಯವಸ್ಥೆ ಕಲ್ಪಿಸಬೇಕಾದ ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ವಾರ್ಡ್ ನಂಬರ 24ರ ನಿವಾಸಿಗಳು ಆರೋಪ. ವಿದ್ಯುತ್ ಕಂಬಗಳಿದ್ದರೂ ಬೆಳಕಿನ ವ್ಯವಸ್ಥೆ ಇಲ್ಲ…
