ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ
ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ ಬಂಗಾರದ ಬದುಕಾಗಿದೆ. ಶಾಲಾ ಮಕ್ಕಳು ಅಮೂಲ್ಯವಾದ ವಿದ್ಯಾರ್ಥಿ ಜೀವನಂದ ಸದುಪಯೋಗಮಾಡಿಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತ್ ಇಒ ಪರಶುರಾಮ ಗಸ್ತಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಡಿ.೨ರಂದು ಆಕಸ್ಮಿಕ ಭೇಟಿ ನೀಡಿ, ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಓದುವ ಗೀಳು ಬೆಳಸಿಕೊಳ್ಳಬೇಕು. ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆದು ತಮ್ಮ ತಂದೆ-ತಾಯಿ, ಊರು ಮತ್ತು…
