ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ಬಗ್ಗೆ ಸಿವಿಲ್ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ ವಿಚಾರಣೆ ನಡೆಸಿದರು.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ಕುಡಿಯುವ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಉಪ ಕಾರ್ಯದರ್ಶಿಗಳು, ಬಾಲ ನ್ಯಾಯ ಸಮಿತಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ರವರು ಸೂಚಿಸಿದ ಮೇರೆಗೆ, ದಿನಾಂಕಃ 21-07-2025 ರಂದು ಸವದತ್ತಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಯಾದ ಶ್ರೀ. ಸಿದ್ರಾಮ ರೆಡ್ಡಿ ರವರ ಜೊತೆಗೆ ಭೇಟಿ ನೀಡಿದ ಗೌರವಾನ್ವಿತ…
