ಕಟ್ಟಡ ನಕ್ಷೆ, ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ ಸುಪ್ರೀಂಕೋರ್ಟ್ ಆದೇಶ | ಡಿ.ಕೆ.ಶಿವಕುಮಾರ್
ಬೆಂಗಳೂರು : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 ಲಕ್ಷ ಜನ ಹಳ್ಳಿಗಳು ಹಾಗೂ ನಗರ ಪ್ರದೇಶಗಳಲ್ಲಿ…
