ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸರ್ಕಾರದ ನೆರವು ನೀಡುವಂತೆ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವತಿಯಿಂದ ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಿ ಬೆಳೆ ಬೆಳೆದಿದ್ದರೂ, ಸಮರ್ಪಕ ಮಳೆಯಾಗದೆ ಬೆಳೆಗಳು ಒಣಗುವ ಪರಿಸ್ಥಿತಿ ಎದುರಾಗಿದೆ. ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಇತರ ಕೃಷಿ ಸಾಮಗ್ರಿಗಳನ್ನು ಖರೀದಿಸಿದ್ದಾರೆ. ಇದೀಗ…
