ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು

WhatsApp Group Join Now

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ?

ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ, ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ.

ಮಾರ್ಚ್ 20 ರಂದು ನಾನು ಮುದ್ದೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ದೆ, ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಶರಣ ಸ್ವಾಮೀಜಿಗಳು ವೇದಿಕೆಯಲ್ಲಿ ಸನ್ಮಾನಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಎಸ್. ನಾಡಗೌಡ ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ
ಎಂ.ಬಿ.ಪಾಟೀಲ, ಜವಳಿ, ಕೃಷಿಮಾರುಕಟ್ಟೆ ಸಚಿವ
ಶಿವಾನಂದ ಪಾಟೀಲ, ವಿಧಾನ ಪರಿಷತ್ ಮಾಜಿ ಮುಖ್ಯ
ಸಚೇತಕ ಪ್ರಕಾಶ ರಾಥೋಡ,
ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ,
ಸುನೀಲಗೌಡ ಪಾಟೀಲ, ಪ್ರೊ.ಎಚ್.ಪೂಜಾರ, ವಿಠಲ
ಕಟಕಧೋಂಡ, ಅಶೋಕ ಮನಗೂಳಿ, ಭೀಮನಗೌಡ
ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ
ನಾಯಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ
ತುಂಗಳ ಉಪಸ್ಥಿತರಿದ್ದರು

About The Author