ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭ

WhatsApp Group Join Now

ರಾಮದುರ್ಗ ಪಟ್ಟಣದ ಹೊರವಲಯದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ 2023-24 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ ಪಿ.ಎಲ್. ಮಿಸಾಳೆ ಪಾಲ್ಗೊಂಡು ಅವರು ಮಾತನಾಡಿದರು.

ದಾಸರು ಹೇಳುವಂತೆ ಮಾನವ ಜೀವನ ದೊಡ್ಡದು. ಇದನ್ನು ಹಾನಿ ಮಾಡಿಕೊಳ್ಳಬೇಡಿರಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಕಾಲೇಜಿಗೆ ಸಮಾಜಕ್ಕೆ ದೇಶಕ್ಕೆ ಕೀರ್ತಿಯನ್ನು ತರಬೇಕು. ವಿದ್ಯಾರ್ಥಿಗಳು ತಂದೆ ತಾಯಿ ಗುರುಗಳನ್ನ ಸ್ಮರಿಸುವದರ ಜೊತೆಗೆ ಈ ದೇಶದ ಸಂವಿಧಾನವನ್ನ ಗೌರವಿಸಬೇಕು ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆ ಸೃಜನಶೀಲತೆಯನ್ನ ಬೆಳೆಸಿಕೊಂಡು ಸಾಧನೆ ಮಾಡಬೇಕು. ದೈವ ಬಲದೊಂದಿಗೆ ಮಾನವ ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ. ಇವತ್ತಿನ ಸವಾಲುಗಳನ್ನ ಮೆಟ್ಟಿ ನಿಲ್ಲಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ವಿಷಯಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು ನಂತರ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಉಪನ್ಯಾಸಕ ಬಿ.ಬಿ. ಹರನಟ್ಟಿ ಸ್ವಾಗತಿಸಿದರು, ಸಂಗಮೇಶ್ ಗಡದೆ ಅತಿಥಿಗಳನ್ನು ಪರಿಚುಸಿದರು, ಉಮೇಶ್ ಹಡಪದ್ ನಿರೂಪಿಸಿದರು. ಆರ್. ವಿ. ಮೂಗುನೂರ ವಂದಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಿ.ಡಿ. ಮುಜಾವರ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಬಸವರಾಜ್ ಪ್ರಧಾನಿ ಹಾಗೂ ರಮೇಶ್ ಬಂಡಿವಡ್ಡರ್ ಸೇರಿದಂತೆ ಕಾಲೇಜಿನ ಎಲ್ಲ ಉಪನ್ಯಾಸಕರು ಉಪಸ್ಥಿತರಿದ್ದರು.

About The Author