ರಾಮದುರ್ಗ ಪಟ್ಟಣದ ಎಂ.ಎಲ್.ಬಿ.ಸಿ ಆವರಣದಲ್ಲಿ ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಸಂಸ್ಥೆಯ ಅಧ್ಯಕ್ಷ ಡಾ| ಆರ್ ಎ ಕಣಬೂರ್ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಬಡಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾಭಾರತಿ ಶಿಕ್ಷಣ ಸಂಸ್ಥೆುಂದ ತಾಲೂಕಿನಲ್ಲಿ ಮೂರು ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಶಾಲೆಯನ್ನು ಸ್ಥಾಪಿಸಿ 1989 ರಿಂದ ಮೂಲ ಸೌಕರ್ಯಗಳ ಜೊತೆಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಈ ಶಾಲೆಗಳಲ್ಲಿ ಕಲಿತ ಸಾವಿರಾರು ಮಕ್ಕಳು ಉತ್ತಮ ವೃತ್ತಿಯಲ್ಲಿದ್ದಾರೆ. ನೂರಾರು ವಿದ್ಯಾರ್ಥಿಗಳು ವಿದೇಶಗಳಲ್ಲಿ ಕೆಲಸ ಮಾಡುತ್ತಿರುವುದು ಸಂಸ್ಥೆಯ ಹೆಮ್ಮೆಯಾಗಿದೆ ಎಂದು ಹರ್ಷವ್ಯಕ್ತಪಡಿಸಿದರು.
ರಾಮದುರ್ಗ ತಾಲೂಕಿನ ಬಟಕುರ್ಕಿ ಶಾಲಾ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಬರುವ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಸಚಿವರಿಂದ ಶಾಲಾ ಕಟ್ಟಡ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದರು.
ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮಿಗಳಿಗೆ ಹಾಗೂ ಸಂಸ್ಥೆಯ ಸಂಸ್ಥಾಪಕ ಉಪಾಧಕ್ಷ ದಿ.ಜಿ.ಆರ್.ಪಾಟೀಲ ಅವರಿಗೆ ನುಡಿನಮನ ಸಲ್ಲಿಸಲಾಯಿತು ಆಡಳಿತಾಧಿಕಾರಿ ಮಲ್ಲಿಕಾರ್ಜುನರಡ್ಡಿ ಗೊಂದಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಶಿಕ್ಷಕ ಬಿ.ವೈ.ಮಳಲಿ ವಂದಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ಒಂದು ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಜಿ.ಬಿ.ರಂಗನಗೌಡ್ರ, ಪುರಸಭೆ ಸದಸ್ಯೆ ಪದ್ಮಾವತಿ ಸಿದ್ಲಿಂಗಪ್ಪನವರ, ಎಂ.ಎಲ್.ಬಿ.ಸಿ ಎಇಇ ಶ್ರೀನಿವಾಸ ಅರಿಷಣಗೋಡಿ, ಗೋಪಾಲರಡ್ಡಿ ಸಂಶಿ. ಶಿಕ್ಷಣ ಸಂಯೋಜಕ ಎ.ಆರ್.ಜೋಶಿ, ರವಿ ನಂದೆಪ್ಪನವರ, ರವಿ ಗಲಬಿ, ಶೇಷಪ್ಪ ಪೋತರಡ್ಡಿ, ಭೀಮಪ್ಪ ಕೊಳಚಿ. ಎಸ್.ಡಿ.ಎಂ.ಸಿ ಅಧ್ಯಕ್ಷ ಕೃಷ್ಣಾ ಬಡಿಗೇರ, ಸೋಮಶೇಖರ ಸಿದ್ಲಿಂಗಪ್ಪನವರ, ಸುರೇಶ ನಂದೆಪ್ಪನವರ, ರಸೂಲ ಖಾಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



