ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ಪಟ್ಟಣದ ತಾ. ಪಂ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆುತು.

WhatsApp Group Join Now

ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಜರಗಿತ್ತು. ಈ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ ಸುರೇಶ ಚವಲಾರ ಮಾತನಾಡಿ, ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಿಂದ ಯಾರು ವಂಚಿತರಾಗಿದ್ದಾರೆ ಅಂತವರಿಗೆ ಸ್ಥಳದಲ್ಲಿಯೇ ಯೋಜನೆಯ ಸೌಲಭ್ಯ ದೊರೆಯುವಂತೆ ಮಾಡುವಲ್ಲಿ ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು ಮುಂದಾಗಬೇಕು. ಅಲ್ಲದೇ ಸರಕಾರ ಈ ಮಹತ್ವಾಕಾಂಕ್ಷೆಯ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಯಶ್ವಿಸಿಗೋಳಿಸಲು ಎಲ್ಲ ಅಧಿಕಾರಿಗಳು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ತಾಲೂಕಿನ ಎಷ್ಟೋ ಜನರು ಇನ್ನೂ ಗ್ಯಾರೆಂಟಿ ಯೋಜನೆುಂದ ವಂಚಿತರಾಗಿದ್ದು, ಆಯಾ ಆಯಾ ಯೋಜನೆಯಡಿ ಅವರಿಗೆ ಬರುಲು ಆಗಿರುವ ಲೋಪದೋಷಗಳನ್ನು ಹುಡುಕಿ ಅವರನ್ನು ಯೋಜನಯಡಿ ತರುವ ಕೆಲಸ ಮಾಡಬೇಕಾದ ಕೆಲಸ ಎಲ್ಲ ಅಧಿಕಾರಿಗಳದ್ದಾಗಿದೆ ಎಂದು ತಿಳಿಸಿದರು.
ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಅವರು ಮಾತನಾಡಿ, ತಾಲೂಕಿನ ಎಲ್ಲ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿ ಸ್ಥಳವಕಾಶವನ್ನು ಪರಶೀಲಿಸಿ ಮಾಹಿತಿ ಒದಗಿಸಬೇಕು. ಸಮಾವೇಶ ಮುಂಚೆ ಎಲ್ಲಾ ರೀತಿಯಿಂದ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ತಾಲೂಕು ಪಂಚಾಯತಿ ಎಲ್ಲ ಅಭಿವೃದ್ದಿ ಅಧಿಕಾರಿಗಳು ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರುಗಳು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿ ಎಲ್ಲರು ಸಮಾವೇಶದಲ್ಲಿ ಭಾಗವಹಿಸುವಂತೆ ತಿಳಿಸಬೇಕು ಎಂದು ಹೇಳಿದರು. ಮುಖ್ಯವಾಗಿ ಗ್ಯಾರೆಂಟಿ ಯೋಜನೆಗಳ ಸಮಾವೇಶದ ಕುರಿತು ಹೆಚ್ಚು ಜನರಿಗೆ ಮಾಹಿತಿ ನೀಡಬೇಕು. ಅಲ್ಲದೇ ಗ್ರಾಮ ಪಂಚಾಯತಿ ಮಟ್ಟದಲ್ಲಿ ಡಂಗೂರಗಳನ್ನು ಸಾರಿ ಜನರೆಗೆ ಮಾಹಿತಿ ತಲುಪಿಸಿ ಸಮಾವೇಶದಲ್ಲಿ ಹೆಚ್ಚು ಜನರು ಭಾಗವಹಿಸುವಂತೆ ನೋಡಿಕೋಳ್ಳುವುದು ಹಾಗೂ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿ ವಹಿಸಲು ಸೂಚಿಸದರು.
ಸಭೆಯಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಎ.ಎಸ್. ಕುಂಬಾರ ಹಾಗೂ ತಾ.ಪಂ ವ್ಯವಸ್ಥಾಪಕ ಹನಮಂತ ಕೊಂತಿಕಲ್ಲ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು, ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕ ಪಂಚಾಯತಿ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author