ರಾಮದುರ್ಗ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರಗಿತು

ರಾಮದುರ್ಗ ತಾಲೂಕಾ ಮಟ್ಟದ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರಗಿತು
ತಹಶೀಲ್ದಾರ ಸುರೇಶ ಚವಲಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ|| ನವೀನ ನಿಜಗುಲಿ ಅವರು ಮಾ ಹಿತಿಯನ್ನು ನೀಡಿದರು ಮಾರ್ಚ 3 ರಂದು ರಾಷ್ಟ್ರೀಯ ಪಲ್ಸಪೋಲಿಯೋ ಕಾರ್ಯಕ್ರಮ ಇರುತ್ತದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಬೇಕಾಗಿದ್ದು ನಮ್ಮ ತಾಲೂಕಿನಲ್ಲಿ ಒಟ್ಟು 27616 ಮಕ್ಕಳಿದ್ದು, ಇದರ ಬಗ್ಗೆ ಮುಂಚಿತವಾಗಿ ಶಾಲಾ ಮಕ್ಕಳ ಕಡೆಯಿಂದ ಜಾಗೃತಿ ಜಾತಾ ಮಾಡಿಸುವುದು, ಮತ್ತು ಮೈಕಿಂಗ್ ಮಾಡಿಸುವುದರ ಬಗ್ಗೆ ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಸುರೇಶ ಚವಲಾರ ಮಾತನಾಡಿ, ಯಾವುದೇ ಮಕ್ಕಳು ಪೊಲೀಯೋ ಹನಿ ಹಾಕಿಲಸು ಉಳಿಯದಂತೆ ನೋಡಿಕೊಳ್ಳುವುದು ಹಾಗೂ ಈ ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ಹೇಳಿದರು.
ಸಭೆಯಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಮಾತನಾಡಿ, ಪಲ್ಸ್ ಪೊಲೀಯೋ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಮಾರ್ಗದರ್ಶನ ನೀಡಿದರು.
ಎಲ್ಲಾ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಆರ್ಬಿಎಸ್ಕೆ ವೈದ್ಯಾಧಿಕಾರಿಗಳು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು
